ಸುಂಟಿಕೊಪ್ಪ, ಜ. 11: ಪ್ರತಿಭೆ ಹುಡುಕಲು ಗುರುಗಳಿಗೆ ಮಾತ್ರ ಸಾಧ್ಯ ಎಂದು ಪ್ರಾಂಶುಪಾಲ ಪಿ.ಎಸ್. ಜಾನ್ ಹೇಳಿದರು. ಸುಂಟಿಕೊಪ್ಪ ಸರಕಾರಿ ಪ್ರೌಢಶಾಲೆಯ ವಾರ್ಷಿಕೋತ್ಸವ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಡಾ. ಬಿ.ಆರ್. ಅಂಬೇಡ್ಕರ್ ಅವರ ಹಿಂದಿನ ನೆನಪುಗಳನ್ನು ಮೇಲುಕು ಹಾಕಿದ ಅವರು ಸಂವಿಧಾನವನ್ನು ರಚಿಸುವುದು ಅಂದಿನ ಕಾಲಘಟ್ಟದಲ್ಲಿ ಕಠಿಣವಾಗಿದ್ದರೂ ಅವರ ಕ್ಷಾತ್ರಶಕ್ತಿ ಮನೋಸ್ಥೈರ್ಯದಿಂದ ಅದನ್ನು ಇತರ ಸದಸ್ಯರ ನೆರವಿನಿಂದ ಮಾಡಿ ಪ್ರಪಂಚಕ್ಕೆ ಮಾದರಿಯಾದ ಸಂವಿಧಾನ ನಿರ್ಮಿಸಿದರು ಎಂದು ಹೇಳಿದರು. ಸಮಾರಂಭ ಉದ್ಘಾಟಿಸಿ ಮಾತನಾಡಿದ ಜಿ.ಪಂ. ಸದಸ್ಯೆ ಕೆ.ಪಿ. ಚಂದ್ರಕಲಾ, ಖಾಸಗಿ ಶಾಲೆಯಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಜಾಸ್ತಿಯಾಗುತ್ತಿದೆ. ಆದರೆ ಸರಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಈಗಿನ ಸಾಧಕ ಬಾಧಕದ ಬಗ್ಗೆ ಚರ್ಚೆಯಾಗಬೇಕಾಗಿದೆ ಎಂದರು. ಸೋಮವಾರಪೇಟೆ ಕ್ಷೇತ್ರ ಶಿಕ್ಷಣಾಧಿಕಾರಿ ಪಾಂಡು ಮಾತನಾಡಿ, ಹಿಂದಿನ ಶಿಕ್ಷಣ ಕ್ಷೇತ್ರಕ್ಕೂ ಈಗಿನ ಕ್ಷೇತ್ರಕ್ಕೂ ಅಜಗಜಂತಾರ ವ್ಯತ್ಯಾಸವಿದೆ. ಮಕ್ಕಳ ವಿದ್ಯಾರ್ಜನೆಯಲ್ಲಿ ಶಿಕ್ಷಕರ ಪಾತ್ರ ಮಹತ್ವದಾಗಿದೆ. ಒಳ್ಳೆ ಫಲಿತಾಂಶ ತರುವಲ್ಲಿ ಪ್ರಯತ್ನಿಸಬೇಕು ಎಂದು ಹೇಳಿದರು. ಸಮಾರಂಭವನ್ನು ಉದ್ದೇಶಿಸಿ ತಾ.ಪಂ. ಸದಸ್ಯೆ ಓಡಿಯಪ್ಪನ ವಿಮಲಾವತಿ ಸುಧೀಶ್, ಗ್ರಾ.ಪಂ. ಅಧ್ಯಕ್ಷೆ ರೋಸ್‍ಮೇರಿ ರಾಡ್ರಿಗಸ್, ಪ್ರೌಢಶಾಲಾ ಮುಖ್ಯೋಪಾ ಧ್ಯಾಯ ಬಾಲಕೃಷ್ಣ, ಕೊಡಗು ಜಿಲ್ಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷ ಸಿ.ಟಿ. ಸೋಮಶೇಖರ್ ಮಾತನಾಡಿದರು. ಸಮಾರಂಭದ ಅಧ್ಯಕ್ಷತೆಯನ್ನು ಶಾಲಾ ಎಸ್‍ಡಿಎಂಸಿ ಅಧ್ಯಕ್ಷ ಚಂದ್ರು ವಹಿಸಿದ್ದರು. ವೇದಿಕೆಯಲ್ಲಿ ಸರಕಾರಿ ಪ್ರಾಥಮಿಕ ಶಾಲಾ ಮುಖ್ಯೋಪಾ ಧ್ಯಾಯಿನಿ ಗೀತಾ, ಸುಂಟಿಕೊಪ್ಪ ಠಾಣಾಧಿಕಾರಿ ಬಿ. ತಿಮ್ಮಪ್ಪ, ಗ್ರಾ.ಪಂ. ಉಪಾಧ್ಯಕ್ಷ ಪಿ.ಆರ್. ಸುಕುಮಾರ್, ಸಂತ ಮೇರಿ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯ ಶಿಕ್ಷಕ ಸೆಲ್ವರಾಜ್, ವಿಎಸ್‍ಎಸ್‍ಎನ್ ಬ್ಯಾಂಕ್ ನಿರ್ದೇಶಕಿ, ಮಹಿಳಾ ಸಮಾಜದ ಅಧ್ಯಕ್ಷೆ ಲೀಲಾವತಿ, ಉಪನ್ಯಾಸಕ ಫಿಲಿಪ್‍ವಾಸ್, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಎಂ.ಎಸ್. ಸುನೀಲ್, ಪಂಚಾಯಿತಿ ಸದಸ್ಯರುಗಳಾದ ರಜಾಕ್, ನಾಗರತ್ನ, ಪಟ್ಟೆಮನೆ ಗಿರಿಜಾ ಉದಯಕುಮಾರ್, ಎಸ್‍ಡಿಎಂಸಿ ಉಪಾಧ್ಯಕ್ಷೆ ವಿಶಾಲಿ, ಸುಂಟಿಕೊಪ್ಪ ಕ್ಲಸ್ಟರ್ ಸಿಆರ್‍ಪಿ ಪುರೋಷತ್ತಮ್, ಉಪನಿರ್ದೇಶಕರ ಉಪ ಅಧೀಕ್ಷಕ ವೆಂಕಟೇಶ್, ನಿವೃತ್ತ ಶಿಕ್ಷಕಿ ಲತಾ ಮತ್ತಿತರರು ಇದ್ದರು.

ವಿದ್ಯಾರ್ಥಿಗಳು ಆಕರ್ಷಕ ಪಥಸಂಚಲನ ಮತ್ತು ಅತಿಥಿಗಳಿಗೆ ಗೌರವ ವಂದನೆಯನ್ನು ಸಲ್ಲಿಸಿದರು. ಸಭಾ ಕಾರ್ಯಕ್ರಮದ ನಂತರ ಮಕ್ಕಳಿಂದ ಮೂಡಿ ಬಂದ ಸಾಂಸ್ಕøತಿಕ ಕಾರ್ಯಕ್ರಮ ಜರುಗಿತು. ಶಾಲಾ ಮಕ್ಕಳು ಪ್ರಾರ್ಥಿಸಿ, ಸಿ.ಟಿ. ಸೋಮಶೇಖರ್ ಸ್ವಾಗತಿಸಿ, ಚಿತ್ರಾ ವರದಿ ವಾಚಿಸಿ, ಪುಷ್ಪಾ ನಿರೂಪಿಸಿದರು.