ಮಡಿಕೇರಿ, ಜ. 11 : ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ತಾ. 31 ಮತ್ತು ಫೆಬ್ರವರಿ 1 ರಂದು ಶನಿವಾರಸಂತೆ ಹೋಬಳಿಯ ನಿಡ್ತ ಗ್ರಾಮದಲ್ಲಿ ನಡೆಯಲಿರುವ ಕೊಡಗು ಜಿಲ್ಲಾ 14ನೇ ಕನ್ನಡ ಸಾಹಿತ್ಯ ಸಮ್ಮೇಳನದ ಲಾಂಛನವನ್ನು ಶಾಸಕ ಅಪ್ಪಚ್ಚು ರಂಜನ್ ಬಿಡುಗಡೆ ಮಾಡಿದರು.
ಈ ಸಂದರ್ಭ ಜಿಲ್ಲಾ ಪಂಚಾಯ್ತಿ ಸದಸ್ಯ ಶ್ರೀನಿವಾಸ್, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಬಿ.ಎಸ್. ಲೋಕೇಶ್ಸಾಗರ್, ಜಿಲ್ಲಾ ಕಸಾಪ ಕಾರ್ಯದರ್ಶಿ ಕೆ ಎಸ್.ರಮೇಶ್, ಮಡಿಕೇರಿ ತಾಲೂಕು ಕಸಾಪ ಅಧ್ಯಕ್ಷ ಕುಡೆಕಲ್ ಸಂತೋಷ್, ಕಸಾಪದ ಫಿಲಿಪ್ ವಾಸ್ ಪದಾಧಿಕಾರಿ ಗಳಾದ ಕೋಡಿ ಚಂದ್ರಶೇಖರ್, ಧನಂಜಯ್, ಮೊಣ್ಣಪ್ಪ ಮತ್ತಿತರರು ಇದ್ದರು.