ಮಡಿಕೇರಿ, ಜ. 13: ಕಕ್ಕಬೆಯ ಪೊನ್ನೋಲತಂಡ ಕುಟುಂಬದ ಆಶ್ರಯದಲ್ಲಿ ಪ್ರಥಮ ವರ್ಷದ ಕೊಡವ ಕುಟುಂಬಗಳ ನಡುವೆ ಹಗ್ಗಜಗ್ಗಾಟ ಸ್ಪರ್ಧೆ ಏರ್ಪಡಿಸಲಾಗಿದೆ. ಪಂದ್ಯಾವಳಿಯ ಲಾಂಛನ ಬಿಡುಗಡೆ ಕಾರ್ಯಕ್ರಮ ತಾ. 15ರಂದು ಮಧ್ಯಾಹ್ನ 2 ಗಂಟೆಗೆ ಮಡಿಕೇರಿಯ ಪತ್ರಿಕಾಭವನದಲ್ಲಿ ನಡೆಯಲಿದ್ದು, ಡಾ. ಅಮ್ಮಾಟಂಡ ಪಾರ್ವತಿ ಅಪ್ಪಯ್ಯ ಬಿಡುಗಡೆಗೊಳಿಸುವರು.