ಕುಶಾಲನಗರ, ಜ. 12: ನಾಪತ್ತೆಯಾಗಿದ್ದ ನಗರದ ಮೆಡಿಕಲ್ ಕಾಲೇಜು ವಿದ್ಯಾರ್ಥಿ ಯೋರ್ವನನ್ನು ಜಿಲ್ಲಾ ಅಪರಾಧ ಪತ್ತೆದಳ ಸಿಬ್ಬಂದಿ ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ.
ಸುಂಟಿಕೊಪ್ಪ ನಿವಾಸಿ ಯಾಗಿದ್ದು, ಮಡಿಕೇರಿ ಮೆಡಿಕಲ್ ಕಾಲೇಜಿನಲ್ಲಿ ವಿದ್ಯಾರ್ಥಿಯಾಗಿದ್ದ ಅಮೋಘ್ ಎಂಬಾತ ಇತ್ತೀಚೆಗೆ ನಾಪತ್ತೆಯಾಗಿದ್ದ. ಈ ಬಗ್ಗೆ ಸುಂಟಿಕೊಪ್ಪ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಎಸ್ಪಿ ಸುಮನ್ ಅವರು ಪ್ರಕರಣವನ್ನು ಜಿಲ್ಲಾ ಅಪರಾಧ ಪತ್ತೆದಳಕ್ಕೆ ವಹಿಸಿದ್ದರು. ಅಪರಾಧ ಪತ್ತೆದಳದ ನಿರೀಕ್ಷಕರಾದ ಮಹೇಶ್ ನೇತೃತ್ವದಲ್ಲಿ ತನಿಖೆ ಕೈಗೊಂಡ ಸಿಬ್ಬಂದಿ ನಿರಂಜನ್ ಹಾಗೂ ವೆಂಕಟೇಶ್ ಇವರುಗಳು ಮುಂಬೈನಲ್ಲಿ ಹೊಟೇಲ್ವೊಂದರಲ್ಲಿ ಕೆಲಸಕ್ಕೆ ಸೇರಿದ್ದ ಅಮೋಘ್ನನ್ನು ಪತ್ತೆ ಹಚ್ಚಿ ಪೋಷಕರ ವಶಕ್ಕೆ ಒಪ್ಪಿಸಿದ್ದಾರೆ.