ಸುಂಟಿಕೊಪ್ಪ, ಜ.13: ಶ್ರೀ ಪುರಂ ಅಯ್ಯಪ್ಪ ಸ್ವಾಮಿ ಕ್ಷೇತ್ರದಲ್ಲಿ 49ನೇ ವರ್ಷದ ಮಕರ ಸಂಕ್ರಾಂತಿ ಮಹೋತ್ಸವದ ಅಂಗವಾಗಿ ವಿವಿಧ ಪೂಜಾÀ ಕಾರ್ಯಗಳು ತಾ.15 ರಂದು ನಡೆಯಲಿದೆ ಎಂದು ದೇವಸ್ಥಾನ ಸಮಿತಿ ತಿಳಿಸಿದೆ. ತಾ.15 ರಂದು ಬೆಳಿಗ್ಗೆ 7 ಗಂಟೆಗೆ ಶ್ರೀ ಅಯ್ಯಪ್ಪ ಸ್ವಾಮಿಗೆ ಪಂಚಾಮೃತ ಅಭಿಷೇಕ, ತುಪ್ಪದ ಅಭಿಷೇಕ, ಕ್ಷೀರಾಭಿಷೇಕ, ಭಸ್ಮಾಭಿಷೇಕ,ಎಳನೀರು ಅಭಿಷೇಕ, ಪುಷ್ಪಾರ್ಚನೆ ನಡೆಯಲಿದೆ. ಸಂಜೆ 6.30ಕ್ಕೆ ದೀಪಾರಾದನೆ, 6.45ಕ್ಕೆ ಮಕರ ವಿಳಕ್ಕು ಪೂಜೆ, ಮಂಗಳಾರತಿ ಹಾಗೂ ಪ್ರಸಾದ ವಿತರಣೆ ನಡೆಯಲಿದೆ.