ನಾಪೆÇೀಕ್ಲು, ಜ. 12: ಜಿಲ್ಲಾ ಪಂಚಾಯಿತಿ, ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ನಾಪೆÇೀಕ್ಲು ಕರ್ನಾಟಕ ಪಬ್ಲಿಕ್ ಶಾಲೆ, ಶಾಲೆಯ ಇಂಟರ್ಯಾಕ್ಟ್ ಕ್ಲಬ್, ಮತ್ತು ಎನ್.ಎಸ್.ಎಸ್. ಘಟಕದ ವತಿಯಿಂದ ನಾಪೆÇೀಕ್ಲು ಪಟ್ಟಣದಲ್ಲಿ ಮತದಾನ ಜಾಗೃತಿ ಜಾಥಾ ನಡೆಯಿತು.

ಜಾಥಾವನ್ನು ಉದ್ಧೇಶಿಸಿ ಮಾತನಾಡಿದ ಶಾಲೆಯ ಶಿಕ್ಷಕ ಶಿವಶಂಕರ್, ಮತದಾರರ ಪಟ್ಟಿಯಲ್ಲಿನ ದೋಷವನ್ನು ಸರಿಪಡಿಸುವ ನಿಟ್ಟಿನಲ್ಲಿ ಚುನಾವಣಾ ಆಯೋಗ ಅವಕಾಶ ಕಲ್ಪಿಸಿದೆ. ಇದನ್ನು ಸರಿಪಡಿಸುವದರ ಮೂಲಕ 18 ವರ್ಷ ಮೇಲ್ಪಟ್ಟವರು ತಪ್ಪದೆ ಮತದಾನದಲ್ಲಿ ಭಾಗಿಯಾಗಬೇಕು ಎಂದು ಮಾಹಿತಿ ನೀಡಿದರು.

ಜಾಥಾದಲ್ಲಿ ಕರ್ನಾಟಕ ಪಬ್ಲಿಕ್ ಶಾಲೆಯ ಉಪಪ್ರಾಂಶುಪಾಲೆ ನಳಿನಿ, ಶಿಕ್ಷಕರಾದ ಗಂಗಮ್ಮ, ಕಸ್ತೂರಿ, ಮಾದೇಶ್, ಅಂಗನವಾಡಿ ಶಿಕ್ಷಕಿಯರಾದ ಆಶಾ, ಜ್ಯೋತಿ ಮತ್ತಿತರರಿದ್ದರು.