ಮಡಿಕೇರಿ, ಜ. 12: ಪ್ರಸಕ್ತ ಸಾಲಿನ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕ (6-8) ಸಂಬಂಧ ಆಯ್ಕೆಯಾದ ಭಾಷ ಶಿಕ್ಷಕರು-6, ಗಣಿತ/ ವಿಜ್ಞಾನ ಶಿಕ್ಷಕರು-1, ಸಮಾಜ ವಿಜ್ಞಾನ ಶಿಕ್ಷಕರು-3 ಅಭ್ಯರ್ಥಿಗಳ ಮುಖ್ಯ ಪಟ್ಟಿಯನ್ನು ತಾ. 6 ರಂದು ಕಚೇರಿ ಸೂಚನಾ ಫಲಕದಲ್ಲಿ ಪ್ರಕಟಿಸಲಾಗಿದೆ.
ಆಯ್ಕೆಗೊಂಡ ಅಭ್ಯರ್ಥಿಗಳಿಗೆ ತಾ. 13 ರಂದು ಬೆಳಿಗ್ಗೆ 11 ಗಂಟೆಗೆ ನಗರದ ಸರ್ಕಾರಿ ಪದವಿಪೂರ್ವ ಕಾಲೇಜು (ಪ್ರೌಢಶಾಲಾ ವಿಭಾಗ) ಸಭಾಂಗಣದಲ್ಲಿ 2019ನೇ ಸಾಲಿನ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರು (6-8) ಕೌನ್ಸಿಲಿಂಗ್ ಮೂಲಕ ಸ್ಥಳ ನಿಯುಕ್ತಿ ಮಾಡಲಾಗುತ್ತದೆ. ಆಯ್ಕೆಗೊಂಡಿರುವ ಅಭ್ಯರ್ಥಿಗಳು ತಮ್ಮ ಮೂಲ ದಾಖಲಾತಿಗಳೊಂದಿಗೆ (ಮೂಲ ಪ್ರಮಾಣ ಪತ್ರಗಳು ಹಾಗೂ 3 ಸೆಟ್ ಜೆರಾಕ್ಸ್ ದೃಢೀಕೃತ ಪ್ರತಿಗಳು, 2 ಭಾವಚಿತ್ರ) ಕೌನ್ಸೆಲಿಂಗ್‍ಗೆ ಹಾಜರಾಗುವಂತೆ ತಿಳಿಸಿದೆ.
ಹೆಚ್ಚಿನ ವಿವರಗಳಿಗೆ ಇಲಾಖಾ ವೆಬ್‍ಸೈಟ್ sಛಿhooಟeಜuಛಿಚಿಣioಟಿ.ಞಚಿಡಿ.ಟಿiಛಿ.iಟಿ ನಲ್ಲಿ ವೀಕ್ಷಿಸಬಹುದು ಅಥವಾ ಉಪ ನಿರ್ದೇಶಕರು (ಆಡಳಿತ) ಸಾರ್ವಜನಿಕ ಶಿಕ್ಷಣ ಇಲಾಖೆ, ಇಲ್ಲಿಯ ನೋಡಲ್ ಅಧಿಕಾರಿ ಕಾಶೀನಾಥ್ ದೂ. 9449704858 ನ್ನು ಸಂಪರ್ಕಿಸಬಹುದು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಪಿ.ಎಸ್. ಮಚ್ಚಾಡೋ ತಿಳಿಸಿದ್ದಾರೆ.