ನಾಪೆÇೀಕ್ಲು, ಜ. 13: ಪರೀಕ್ಷೆಗಳು ವಿದ್ಯಾರ್ಥಿಗಳಿಗೆ ಕ್ರೀಡಾಂಗಣವೂ ಹೌದು ರಣಾಂಗಣವೂ ಹೌದು. ಪೂರ್ವ ತಯಾರಿಯೊಂದಿಗೆ ಪರೀಕ್ಷೆಗಳಿಗೆ ಸಿದ್ಧತೆ ನಡೆಸಿದರೆ ಯಶಸ್ಸು ಗಳಿಸಲು ಸಾಧ್ಯ ಎಂದು ಅಂತರಾಷ್ಟ್ರೀಯ ಕ್ರೀಡಾಪಟು ತೀತಮಾಡ ಅರ್ಜುನ್ ದೇವಯ್ಯ ಕಿವಿಮಾತು ಹೇಳಿದರು. ಶ್ರೀ ರಾಮಟ್ರಸ್ಟ್ ವಿದ್ಯಾಸಂಸ್ಥೆಯ ಸಭಾಂಗಣದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ, ಶ್ರೀ ರಾಮಟ್ರಸ್ಟ್ ವಿದ್ಯಾಸಂಸ್ಥೆ ಹಾಗೂ ಕೊಡಗುವಿಕಸನ ಸಹಯೋಗ ದೊಂದಿಗೆ ಎಸ್‍ಎಸ್ ಎಲ್‍ಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಎದುರಿಸಲು ಮಾರ್ಗದರ್ಶನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ವಿಚಾರಗಳು ಹಾಗೂ ತತ್ವಗಳು ಜೀವನವನ್ನು ಬದಲಾಯಿಸಲಾರವು. ಜೀವನದಲ್ಲಿ ಗುರಿ ಮಾತ್ರ ಮುಖ್ಯವಲ್ಲ. ಉದ್ದೇಶ ಬಹಳ ಮುಖ್ಯ ಎಂದರು.

ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಪಿ. ಎಸ್. ಮಚ್ಚಾಡೋ ಮಾತನಾಡಿ ನನ್ನಿಂದ ಸಾಧ್ಯ ಎಂಬ ಆತ್ಮವಿಶ್ವಾಸದಿಂದ ಪರೀಕ್ಷೆ ಎದುರಿಸಿ ಸೋಮಾರಿತನವನ್ನು ಬಿಡಿ ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ವೇದಿಕೆಯಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಗಾಯತ್ರಿ, ವಿದ್ಯಾಸಂಸ್ಥೆಯ ಉಪಾಧ್ಯಕ್ಷ ಕಲಿಯಂಡ ಹ್ಯಾರಿ ಮಂದಣ್ಣ, ಕೊಡಗು ವಿಕಸನದ ಕಿಶೋರ್‍ರೈ ಕತ್ತಲೆಕಾಡು, ಚೇನಂಡ ಸತ್ಯ ಉಪಸ್ಥಿತರಿದ್ದರು. ವಿದ್ಯಾರ್ಥಿನಿ ಯಾನ ಪ್ರಾರ್ಥನೆ. ವಿದ್ಯಾಸಂಸ್ಥೆಯ ಪ್ರಾಂಶುಪಾಲೆ ಬಿ.ಎಂ.ಶಾರದ ಸ್ವಾಗತಿಸಿ, ಪಿ.ಎಸ್.ಮಚ್ಚಾಡೋ ವಂದಿಸಿದರು.