ಕೂಡಿಗೆ, ಜ. 13 : ಕೂಡಿಗೆಯ ಸದ್ಗುರು ಅಪ್ಪಯ್ಯ ಪ್ರೌಢಶಾಲಾ ವತಿಯಿಂದ 156 ನೇ ಸ್ವಾಮಿ ವಿವೇಕಾನಂದ ಜಯಂತಿಯನ್ನು ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ದಿನದ ಮಹತ್ವ ಕುರಿತು ಹಿರಿಯ ಶಿಕ್ಷP ದುರ್ಗೇಶ್ ಮಾತಾನಾಡಿದರು. ಅಧ್ಯಕ್ಷತೆಯನ್ನು ಶಾಲಾ ಮುಖ್ಯ ಶಿಕ್ಷಕಿ ಎ. ವಿ ಸ್ವಾತಿ ವಹಿಸಿದರು. ಈ ಸಂಧರ್ಭ ಶಾಲಾ ವಿಧ್ಯಾರ್ಥಿಗಳಿಂದ ವಿವೇಕಾನಂದರ ಛದ್ಮವೇಷ ಸ್ಪಧೆರ್É ನಡೆದವು. ನಂತರ ವಿಧ್ಯಾರ್ಥಿಗಳಿಗೆ ಬಹುಮಾನವನ್ನು ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಶಿಕ್ಷಕ ವೃಂದ, ವಿಧ್ಯಾರ್ಥಿಗಳು ಭಾಗವಹಿಸಿದ್ದರು.