ಸುಂಟಿಕೊಪ್ಪ, ಜ. 12: ಪೌರತ್ವ ತಿದ್ದುಪಡಿ ಕಾಯ್ದೆಯ ಬಗ್ಗೆ ಸುಂಟಿಕೊಪ್ಪ ನಗರ ಬಿಜೆಪಿ ವತಿಯಿಂದ ಸಂತೆ ದಿನವಾದ ಇಂದು ವ್ಯಾಪಾರಸ್ಥರಿಗೆ, ಗ್ರಾಹಕರಿಗೆ ಕರಪತ್ರವನ್ನು ಹಂಚುವ ಮೂಲಕ ಜಾಗೃತಿ ಮೂಡಿಸಲಾಯಿತು.
ನಗರ ಬಿಜೆಪಿ ಅಧ್ಯಕ್ಷ ಪಿ.ಆರ್. ಸುನಿಲ್ಕುಮಾರ್, ತಾಲೂಕು ಪಂಚಾಯಿತಿ ಸದಸ್ಯೆ ಓಡಿಯಪ್ಪನ ವಿಮಲಾವತಿ, ನಗರ ಬಿಜೆಪಿ ಹಿಂದುಳಿದ ವರ್ಗದ ಅಧ್ಯಕ್ಷ ವಾಸು, ಬಿಜೆಪಿ ಯುವಮೋರ್ಚಾ ಅಧ್ಯಕ್ಷ ರಂಜಿತ್ ಪೂಜಾರಿ ಮತ್ತಿತರರು ಇದ್ದರು.