ಸುಂಟಿಕೊಪ್ಪ, ಜ. 14: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಶ್ರದ್ಧಾ ಕೇಂದ್ರ ಸ್ವಚ್ಛತಾ ಕಾರ್ಯಕ್ರಮದ ಅಂಗವಾಗಿ ಕಾನ್‍ಬೈಲ್ ಶ್ರೀ ರಾಮ ಮಂದಿರ ಆವರಣವನ್ನು ನಾಕೂರು-ಶಿರಂಗಾಲ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಒಕ್ಕೂಟ ಹಾಗೂ ಸ್ವ ಸಹಾಯ ಸಂಘದ ಪದಾಧಿಕಾರಿಗಳು ಸ್ವಚ್ಛ ಮಾಡಿದರು.

ಜ್ಞಾನ ವಿಕಾಸ ಸಮನ್ವಯ ಅಧಿಕಾರಿ ಪದ್ಮಾ ಚಾಲನೆ ನೀಡಿದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಒಕ್ಕೂಟದ ಪದಾಧಿಕಾರಿ ಹಾಗೂ ಸ್ವ ಸಹಾಯ ಸಂಘಗಳ ಸದಸ್ಯರು ಶ್ರೀ ರಾಮ ಮಂದಿರದ ಆವರಣದಲ್ಲಿ ಬೆಳೆದಿದ್ದ ಕಾಡು ಗಿಡಗುಂಟೆಗಳನ್ನು ಕಡಿದು ಆವರಣದ ಕಸ ಕಡ್ಡಿಗಳನ್ನು ಸ್ವಚ್ಛಗೊಳಿಸಿದರು.

ಈ ಸಂದರ್ಭ ಸೇವಾ ಪ್ರತಿನಿಧಿ ಯಶೋಧ ಬಸವರಾಜ್, ಒಕ್ಕೂಟದ ಅಧ್ಯಕ್ಷೆ ರೇಖಾ, ಮಾಜಿ ಅಧ್ಯಕ್ಷೆ ಖತ್ತೀಜ ವಿವಿಧ ಸ್ವಸಹಾಯ ಸಂಘಗಳ ಪದಾಧಿಕಾರಿಗಳು ಇದ್ದರು.