ಮಡಿಕೇರಿ, ಜ. 14: ಸೋಮವಾರಪೇಟೆ ಕೊಡವ ಸಮಾಜದಿಂದ ಅಧ್ಯಕ್ಷ ಮಾಳೇಟಿರ ಬಿ. ಅಭಿಮನ್ಯುಕುಮಾರ್ ಅಧ್ಯಕ್ಷತೆಯಲ್ಲಿ ಇತ್ತೀಚೆಗೆ ನಡೆದ ಪುತ್ತರಿ ಊರೋರ್ಮೆ ಕಾರ್ಯಕ್ರಮದಲ್ಲಿ ಸಾಮಾಜಿಕ ಸೇವೆಗಾಗಿ ಮಾಳೆಯಂಡ ಡಾಲಿ ಜೋಯಪ್ಪ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಅತಿಥಿಯಾಗಿ ನಿವೃತ್ತ ಐಎಎಸ್ ಅಧಿಕಾರಿ ಅವರೆಮಾದಂಡ ಕೆ. ಮೊಣ್ಣಪ್ಪ ಪಾಲ್ಗೊಂಡಿದ್ದರು.