*ಗೋಣಿಕೊಪ್ಪಲು, ಜ. 14 : ಉಗ್ರಗಾಮಿಗಳ ಚಟುವಟಿಕೆಗೆ ಗೋಣಿಕೊಪ್ಪಲನ್ನು ಕೇಂದ್ರವಾಗಿಸಲು ಯೋಜನೆ ರೂಪಿಸಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ. ಕಾರ್ಮಿಕರ ಸಮಸ್ಯೆ ಎದುರಿಸುತ್ತಿರುವ ಬೆಳೆಗಾರರ ತೋಟಗಳಲ್ಲಿ ಕಾರ್ಮಿಕರ ಸೋಗಿನಲ್ಲಿ ಉಗ್ರಗಾಮಿಗಳ ಚಟುವಟಿಕೆ ನಡೆಯುತ್ತಿದೆಯೇ ಎಂಬ ಸಂಶಯ ಕಾಡುತ್ತಿದೆ ಎಂದು ಜಿ.ಪಂ. ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷ ಸಿ.ಕೆ. ಬೋಪಣ್ಣ ಆತಂಕ ವ್ಯಕ್ತಪಡಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಅಸ್ಸಾಂ ರಾಜ್ಯದಿಂದ ವಲಸೆ ಬಂದ 15 ಸಾವಿರಕ್ಕೂ ಹೆಚ್ಚು ಜನ ಕೊಡಗಿನ ಕಾಫಿ ತೋಟಗಳಲ್ಲಿ ಕಾರ್ಮಿಕರಾಗಿದ್ದಾರೆ. ಆದರೆ ಇವರುಗಳು ಬಾಂಗ್ಲ ದೇಶದ ಮೂಲ ನಿವಾಸಿಗಳು ಎಂಬುದು ಇದೀಗ ಚರ್ಚೆಗೆ ಕಾರಣವಾ ಗಿದೆ. ಈ ವ್ಯವಸ್ಥೆ ಯೊಳಗೆ ಬೆಳೆಗಾರರ ಕಾಫಿ ತೋಟಗಳಲ್ಲಿ ಮತ್ತು ತೋಟದ ಮನೆಗಳು ಉಗ್ರರ ಚಟುವಟಿಕೆಗಳಿಗೆ ಬಳಕೆಯಾಗುತ್ತಿವೆಯೆ ಎಂಬ ಅನುಮಾನ ಕಾಡುತ್ತಿದೆ. ಈ ಬಗ್ಗೆ ಬೆಳೆಗಾರರು ಜಾಗೃತರಾಗ ಬೇಕಾಗಿದೆ ಎಂದರು.

ಬೆಂಗಳೂರು, ಮೈಸೂರು ಭಾಗಗಳಲ್ಲಿ ನೆಲೆಸಿರುವ ಕೊಡಗಿನ ಬಹಳಷ್ಟು ಮಂದಿ ಕಾಫಿ ತೋಟಗಳನ್ನು ನಿರ್ವಹಿಸಲು ಸಾಧ್ಯವಾಗದೇ ಕೇರಳ ಮೂಲದವರಿಗೆ ನಿರ್ವಹಣೆಗೆ ನೀಡಲಾಗಿದೆ. ಈ ಕಾರಣಗಳಿಂದ ಉಗ್ರ ಚಟುವಟಿಕೆಗಳು ನಡೆಯುತ್ತಿದೆಯೇ ಎಂಬ ಅನುಮಾನವನ್ನು ವ್ಯಕ್ತಪಡಿಸಿದ್ದಾರೆ. ಕೇರಳ ಗಡಿಗೆ ಬಹಳ ಸಮೀಪದಲ್ಲಿರುವುದರಿಂದ ಉಗ್ರರ ಚಟುವಟಿಕೆಗಳು ಕೊಡಗಿನ ಗೋಣಿಕೊಪ್ಪಲುವಿನಲ್ಲಿ ನಡೆಯಲು ಮುಖ್ಯ ಕಾರಣವಾಗುತ್ತಿದೆ ಎಂಬ ಆತಂಕವನ್ನು ವ್ಯಕ್ತಪಡಿಸಿದ್ದಾರೆ. ಬೆಳೆಗಾರರು ತÀಮ್ಮ ತೋಟಗಳನ್ನು ನಿರ್ವಹಿಸುವ ಜವಾಬ್ದಾರಿಯನ್ನು ಹೊರಗಿನವರಿಗೆ ನೀಡದೇ ತಾವೇ ಅದನ್ನು ನಿಭಾಯಿಸಿದರೆ ಇಂತಹ ಉಗ್ರ ಚಟುವಟಿಕೆಗಳಿಗೆ ಅವಕಾಶ ಸಿಗುವುದಿಲ್ಲ ಎಂದು ಹೇಳಿದ್ದಾರೆ.

ಗೋಣಿಕೊಪ್ಪಲುವಿನ ಪ್ರಮುಖ ವ್ಯಕ್ತಿಯ ಮೂಲಕ ಉಗ್ರ ಚಟುವಟಿಕೆಗೆ ಸಹಾಯ ಹಸ್ತ ನೀಡುವ ಬಗ್ಗೆ ಮಾಹಿತಿ ಬಂದಿದೆ. ಈ ವ್ಯಕ್ತಿಯ ಬಗ್ಗೆ ಪೆÇಲೀಸ್ ಇಲಾಖೆ ತನಿಖೆ ಕೈಗೊಳ್ಳ ಬೇಕಾಗಿದೆ ಎಂದು ಒತ್ತಾಯಿಸಿದ್ದಾರೆ.