ಎಸ್.ಪಿ. ಸುಮನ್

ಕುಶಾಲನಗರ, ಜ. 14: ಪೊಲೀಸ್ ಇಲಾಖೆಯೊಂದಿಗೆ ನಾಗರಿಕರು ಕೈಜೋಡಿಸಿದಲ್ಲಿ ಅಪರಾಧ ಮುಕ್ತ ಸಮಾಜ ನಿರ್ಮಾಣ ಸಾಧ್ಯ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಡಿ.ಪಿ. ಸುಮನ್ ಅಭಿಪ್ರಾಯ ವ್ಯಕ್ತಪಡಿಸಿದರು. ಕುಶಾಲನಗರದ ಎಪಿಸಿಎಂಎಸ್ ಸುವರ್ಣ ಮಹೋತ್ಸವ ಸಭಾಂಗಣದಲ್ಲಿ ಡಿವೈಎಸ್ಪಿ ಪಿ.ಕೆ. ಮುರಳೀಧರ್ ಅವರ ವರ್ಗಾವಣೆ ಹಿನ್ನೆಲೆ ನಡೆದ ಬೀಳ್ಕೊಡುಗೆ ಸಮಾರಂಭದಲ್ಲಿ ಅವರು ಮಾತನಾಡಿದರು.

ಸನ್ಮಾನ ಸ್ವೀಕರಿಸಿ ಮಾತನಾಡಿದ ಡಿವೈಎಸ್ಪಿ ಪಿ.ಕೆ. ಮುರಳೀಧರ್, ಕಳೆದೆರೆಡು ವರ್ಷಗಳ ಕಾಲ ಡಿವೈಎಸ್ಪಿಯಾಗಿ ಪೊಲೀಸ್ ಇಲಾಖೆ ಉನ್ನತ ಅಧಿಕಾರಿಗಳು, ಜಿಲ್ಲಾ ವರಿಷ್ಠಾಧಿಕಾರಿಗಳ ಸೂಚನೆ ಮೇರೆಗೆ ಕಾನೂನುಬದ್ದವಾಗಿ ಕರ್ತವ್ಯ ನಿರ್ವಹಿಸಿದ ಸಮಾಧಾನ ಹೊಂದಿರುವುದಾಗಿ ತಿಳಿಸಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮತ್ತು ಅಧಿಕಾರಿ, ಸಿಬ್ಬಂದಿಗಳ ತಂಡ ಸೇರಿದಂತೆ ಕುಶಾಲನಗರದ ಹಲವು ಸಂಘ-ಸಂಸ್ಥೆಗಳ ಪ್ರಮುಖರು ಮುರಳೀಧರ್ ಅವರನ್ನು ಸನ್ಮಾನಿಸಿ ಗೌರವಿಸಿದರು. ಕುಶಾಲನಗರ ವೃತ್ತ ನಿರೀಕ್ಷಕ ಎಂ. ಮಹೇಶ್ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕುಶಾಲನಗರ ಗ್ರಾಮಾಂತರ ಠಾಣಾಧಿಕಾರಿ ನಂದೀಶ್ ಸ್ವಾಗತಿಸಿದರು. ಸಂಚಾರಿ ಠಾಣೆಯ ಜೋಸೆಫ್ ಡಿವೈಎಸ್ಪಿ ಅವರ ವ್ಯಕ್ತಿ ಪರಿಚಯ ಮಾಡಿದರು, ನಿಶಾ ಪ್ರಾರ್ಥಿಸಿ, ಸೋಮವಾರಪೇಟೆ ಠಾಣಾಧಿಕಾರಿ ಶಿವಶಂಕರ್ ವಂದಿಸಿದರು.

ಕಾರ್ಯಕ್ರಮದಲ್ಲಿ ಡಿವೈಎಸ್ಪಿ ಹೆಚ್.ಎಂ. ಶೈಲೇಂದ್ರ, ವೃತ್ತ ನಿರೀಕ್ಷಕ ನಂಜುಂಡೇಗೌಡ, ಠಾಣಾಧಿಕಾರಿಗಳಾದ ವೆಂಕಟರಮಣ, ಅಚ್ಚಮ್ಮ, ತಿಮ್ಮಪ್ಪ ವಿವಿಧ ಸಂಘಸಂಸ್ಥೆಗಳ ಪ್ರಮುಖರಾದ ಯಾಕೂಬ್, ಕೂರನ ಪ್ರಕಾಶ್, ಜಿ.ಎಲ್. ನಾಗರಾಜ್, ಎಂ.ಎನ್. ಚಂದ್ರಮೋಹನ್, ಮಂಡೇಪಂಡ ಬೋಸ್ ಮೊಣ್ಣಪ್ಪ, ಕೇಚಪ್ಪನ ಮೋಹನ್ ಕುಮಾರ್, ಪೊನ್ನಚ್ಚನ ಮೋಹನ್ ಕುಮಾರ್, ಕೆ.ಆರ್.ಜಗದೀಶ್ ಸೇರಿದಂತೆ ವಿವಿಧ ಠಾಣೆಗಳ ಅಧಿಕಾರಿ, ಸಿಬ್ಬಂದಿಗಳು ಇದ್ದರು.