ಸೋಮವಾರಪೇಟೆ,ಜ.14: ಗಜ್ಜೆಹಣಕೋಡು ಗ್ರಾಮದಲ್ಲಿ ಕೆಲಸ ಮಾಡುತ್ತಿದ್ದ ಮೂಲತಃ ಚಿಕ್ಕಮಗಳೂರಿನ ಯುವತಿಯೋರ್ವಳು ಕಳೆದೊಂದು ವಾರದಿಂದ ನಾಪತ್ತೆಯಾಗಿರುವ ಬಗ್ಗೆ ಸೋಮವಾರಪೇಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಚಿಕ್ಕಮಗಳೂರು ಜಿಲ್ಲೆ, ತರೀಕೆರೆ ತಾಲೂಕು, ಕೃಷ್ಣಾಪುರ ಗ್ರಾಮ ನಿವಾಸಿ ಶಾಲಿನಿ (21) ಎಂಬಾಕೆ ಕಳೆದ ಕೆಲ ಸಮಯದಿಂದ ತಾಲೂಕಿನ ಗೆಜ್ಜೆಹಣಕೋಡು ಗ್ರಾಮದ ಸುರೇಶ್ ಅವರ ಮನೆಯಲ್ಲಿ ಮಗುವನ್ನು ನೋಡಿಕೊಳ್ಳುವ ಕೆಲಸ ಮಾಡುತ್ತಿದ್ದು, ಕಳೆದ ತಾ. 8ರಂದು ಮನೆಯಿಂದ ನಾಪತ್ತೆಯಾಗಿರುವದಾಗಿ ದೂರಿನಲ್ಲಿ ವಿವರಿಸಲಾಗಿದೆ.

ಕಪ್ಪು ಮೈಬಣ್ಣ, ಸಾಧಾರಣ ಮೈಕಟ್ಟು ಹೊಂದಿರುವ ಈಕೆಯ ಬಗ್ಗೆ ಸುಳಿವು ಸಿಕ್ಕಲ್ಲಿ ಸೋಮವಾರಪೇಟೆ ಪೊಲೀಸ್ ಠಾಣೆ ದೂ: 08276 282040 ಸಂಖ್ಯೆಗೆ ಮಾಹಿತಿ ನೀಡುವಂತೆ ಠಾಣಾಧಿಕಾರಿ ಶಿವಶಂಕರ್ ಮನವಿ ಮಾಡಿದ್ದಾರೆ.