ಗೋಣಿಕೊಪ್ಪ ವರದಿ, ಜ. 14 : ಟಿ. ಶೆಟ್ಟಿಗೇರಿ ಪಟ್ಟಣದಲ್ಲಿ ಪೊಲೀಸ್ ಇಲಾಖೆ ವತಿಯಿಂದ ರಸ್ತೆ ಸುರಕ್ಷತಾ ಸಪ್ತಾಹ ಅಂಗವಾಗಿ ವಾಹನ ಸವಾರರಿಗೆ ಸಂಚಾರಿ ನಿಯಮಗಳ ಕುರಿತು ಅರಿವು ಮೂಡಿಸ ಲಾಯಿತು.

ಹೆಲ್ಮೆಟ್ ಧರಿಸದ ದ್ವಿಚಕ್ರ ವಾಹನ ಸವಾರರಿಗೆ ದಂಡ ವಿಧಿಸುವ ಬದಲಾಗಿ ಗುಲಾಬಿ ಹೂ ನೀಡುವ ಮೂಲಕ ಪೊಲೀಸ್ ಸಿಬ್ಬಂದಿ ಜಾಗೃತಿ ಮೂಡಿಸಿದರು. ಈ ಸಂದರ್ಭ ವೃತ್ತ ನಿರೀಕ್ಷಕ ಪರಶಿವಮೂರ್ತಿ, ಶ್ರೀಮಂಗಲ ಉಪನಿರೀಕ್ಷಕ ದಿನೇಶ್ ಕುಮಾರ್ ಇದ್ದರು.