ಕೂಡಿಗೆ, ಜ. 16: ಕೂಡುಮಂಗಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಾರಂಗಿ ಕುಶಾಲನಗರಕ್ಕೆ ತೆರಳುವ ಬಸ್ ಶೆಲ್ಟರ್‍ನಲ್ಲಿ ಹಸಿ ಆರು ಕೆ.ಜಿ. ಗಾಂಜಾವನ್ನು ಚೀಲದಲ್ಲಿ ಇಟ್ಟುಕೊಂಡು ಕುಶಾಲನಗರದ ಕಡೆಗೆ ಹೋಗಲು ಬಸ್ ಕಾಯುತ್ತಿದ್ದ ಖಚಿತ ಮಾಹಿತಿಯ ಮೇರೆಗೆ ದಾಳಿ ಮಾಡಿ ಕುಶಾಲನಗರ ಪೊಲೀಸರು ರೂ. 35 ಸಾವಿರ ಮೌಲ್ಯದ ಗಾಂಜಾವನ್ನು ವಶಪಡಿಸಿ ಕೊಂಡು ಆರೋಪಿಯನ್ನು ಬಂಧಿಸಿದ್ದಾರೆ. (ಮೊದಲ ಪುಟದಿಂದ) ಕೂಡುಮಂಗಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೆಂಡೆಬೆಟ್ಟದ ಕರಿಯ ಎಂಬವರ ಪುತ್ರ ಮೋಹನ್ ಎಂಬಾತನನ್ನು ಬಂಧಿಸಿ ನ್ಯಾಯಲಯಕ್ಕೆ ಹಾಜರುಪಡಿಸಿದ್ದಾರೆ. ಸ್ಧಳಕ್ಕೆ ಕುಶಾಲನಗರ ಡಿವೈಎಸ್‍ಪಿ ಶೈಲೇಂದ್ರ, ವೃತ್ತ ನಿರೀಕ್ಷಕ ಮಹೇಶ್, ಕುಶಾಲನಗರ ಗ್ರಾಮಾಂತರ ಠಾಣಾಧಿಕಾರಿ ನಂದೀಶ್ ಭೇಟಿ ನೀಡಿದ್ದರು. ಕಾರ್ಯಾಚರಣೆಯಲ್ಲಿ ಅಪರಾಧ ಪತ್ತೆದಳದ ಸಿಬ್ಬಂದಿಗಳಾದ ದಯಾನಂದ, ಜೋಸಫ್, ಲೋಕೇಶ್, ಚಾಲಕ ಗಣೇಶ್ ಇದ್ದರು.