ಕುಶಾಲನಗರ, ಜ. 18: ಪಲ್ಸ್ ಪೋಲಿಯೋ ಕಾರ್ಯಕ್ರಮ ಹಿನ್ನಲೆ ಯಲ್ಲಿ ಕೊಪ್ಪ ಸರಕಾರಿ ಸಮುದಾಯ ಆರೋಗ್ಯ ಕೇಂದ್ರ ಮತ್ತು ಸ್ಥಳೀಯ ಸರಕಾರಿ ಮಾದರಿ ಪ್ರಾಥಮಿಕ ಶಾಲೆ ಸಹಯೋಗದಲ್ಲಿ ಜನರಲ್ಲಿ ಜಾಗೃತಿ ಮೂಡಿಸಲು ಮೆರವಣಿಗೆ ನಡೆಯಿತು.
ಗ್ರಾಮದ ಪ್ರಮುಖ ಬೀದಿಯಲ್ಲಿ ಆರೋಗ್ಯ ಅಧಿಕಾರಿ ಮುಜೀಬ್, ರಮಣಿ ಮತ್ತಿತರರ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಶಾಲಾ ವಿದ್ಯಾರ್ಥಿಗಳು ತಾ. 19 ರಂದು (ಇಂದು) ನಡೆಯಲಿರುವ ಪೋಲಿಯೋ ಕಾರ್ಯಕ್ರಮದ ಬಗ್ಗೆ ಘೋಷಣೆ ಕೂಗುತ್ತಾ ತೆರಳಿದರು.