ಸೋಮವಾರಪೇಟೆ, ಜ. 17: ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ತಾಲೂಕಿನ ಹೊಸಳ್ಳಿ ಬಸವೇಶ್ವರ ದೇವಸ್ಥಾನಕ್ಕೆ ರೂ. 2 ಲಕ್ಷ ಅನುದಾನ ಬಿಡುಗಡೆಯಾಗಿದ್ದು, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ತಾಲೂಕು ಯೋಜನಾಧಿಕಾರಿ ವೈ. ಪ್ರಕಾಶ್ ದೇವಾಲಯ ಸಮಿತಿ ಪದಾಧಿಕಾರಿಗಳು ಡಿ.ಡಿ. ವಿತರಿಸಿದರು.

ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಶ್ರೀ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಧಾರ್ಮಿಕ ಕ್ಷೇತ್ರಗಳ ಅಭಿವೃದ್ಧಿಗೆ ಒತ್ತು ನೀಡುವ ಉದ್ದೇಶದಿಂದ ರೂ. 2 ಲಕ್ಷ ಅನುದಾನ ನೀಡಿದ್ದು, ಕ್ಷೇತ್ರದಿಂದ ಬಂದ ಅನುದಾನವನ್ನು ಸದ್ಭಳಕೆ ಮಾಡಿ ದೇವಸ್ಥಾನದ ನಿರ್ಮಾಣ ಕಾರ್ಯವನ್ನು ಶೀಘ್ರವಾಗಿ ಪೂರ್ತಿಗೊಳಿಸುವಂತೆ ಪ್ರಕಾಶ್ ಆಶಿಸಿದರು.

ಈ ಸಂದರ್ಭ ಸೋಮವಾರಪೇಟೆ ವಲಯದ ಮೇಲ್ವಿಚಾರಕ ರವಿಪ್ರಸಾದ್ ಆಲಾಜೆ, ದೇವಸ್ಥಾನ ಸಮಿತಿ ಅಧ್ಯಕ್ಷ ಹೆಚ್.ಕೆ. ಲೋಕೇಶ್ ಹಾಗೂ ಸಮಿತಿ ಪದಾಧಿಕಾರಿಗಳು ಉಪಸ್ಥಿತರಿದ್ದರು.