ಮಡಿಕೇರಿ, ಜ. 18: ಕರ್ನಾಟಕ ರಾಜ್ಯ ವಕ್ಫ್ ಮಂಡಳಿ ವತಿಯಿಂದ ಆಯುಷ್ಮಾನ್ ಭಾರತ್ ಆರೋಗ್ಯ ಯೋಜನೆಯ ಬಗ್ಗೆ ಮಾಹಿತಿ ನೀಡಲು ಹಾಗೂ ಬಡ ಕುಟುಂಬದವರಿಗೆ ಸರ್ಕಾರದ ವತಿಯಿಂದ ರೂ. 5 ಲಕ್ಷದವರೆಗೆ ಉಚಿತ ಚಿಕಿತ್ಸೆ ಮಾಡಲು ಸಂಬಂಧಪಟ್ಟ ಆರೋಗ್ಯ ಕೇಂದ್ರಗಳಿಗೆ ಮಾಹಿತಿ ಒದಗಿಸಲಾಗುವುದು. ಇದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನೀಡಲು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಅವರಿಂದ ತಾ. 23 ರಂದು ಮಧ್ಯಾಹ್ನ 2 ಗಂಟೆಗೆ ನಗರದ ಕಾವೇರಿ ಕಲಾಕ್ಷೇತ್ರದಲ್ಲಿ ಸಭೆ ನಡೆಯಲಿದೆ. ಮಸೀದಿಯ ಅಧ್ಯಕ್ಷರು, ಕಾರ್ಯದರ್ಶಿ ಹಾಗೂ ಪೇಶ್ ಇಮಾಮ್ ಇದರ ಸದುಪಯೋಗ ಪಡೆದುಕೊಳ್ಳುವಂತೆ ಜಿಲ್ಲಾ ವಕ್ಫ್ ಮಂಡಳಿಯ ಅಧ್ಯಕ್ಷರು ತಿಳಿಸಿದ್ದಾರೆ.