ಕೂಡಿಗೆ, ಜ. 18: ಕೂಡು ಮಂಗಳೂರು ಗ್ರಾಮ ಪಂಚಾಯ್ತಿಯನ್ನು ಮೇಲ್ದರ್ಜೆ ಗೇರಿಸುವಂತೆ ಗ್ರಾಮಸ್ಥರು ಹಾಗೂ ಹಲವು ಸಂಘ ಸಂಸ್ಥೆಗಳು ಒತ್ತಾಯಿಸುತ್ತಿದ್ದು, ಇದಕ್ಕೆ ಪೂರಕವಾಗಿ ತಾ. 19ರಂದು (ಇಂದು) ಕೂಡುಮಂಗಳೂರು ಸಮುದಾಯ ಭವನದಲ್ಲಿ ಗ್ರಾಮಸ್ಥರು, ಸಂಘ-ಸಂಸ್ಥೆಗಳು, ದೇವಾಲಯ ಆಡಳಿತ ಮಂಡಳಿ, ಗ್ರಾ.ಪಂ ಆಡಳಿತ ಮಂಡಳಿ ಸಮ್ಮುಖದಲ್ಲಿ ಸಭೆ ನಡೆಯಲಿದೆ.
ಸಭೆಯಲ್ಲಿ ಗ್ರಾಮ ಪಂಚಾಯ್ತಿ ಯನ್ನು ಪಟ್ಟಣ ಪಂಚಾಯ್ತಿ ಯನ್ನಾಗಿಸುವ ಬಗ್ಗೆ ರೂಪುರೇಷೆಗಳನ್ನು ಸಿದ್ಧಪಡಿಸಲು ಮತ್ತು ಅದಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳನ್ನು ಭೇಟಿ ಮಾಡುವ ಬಗ್ಗೆ ಚರ್ಚೆ ನಡೆಸಲಾಗುವುದು.