ಕೂಡಿಗೆ, ಜ. 17: ಕೂಡಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೆಗ್ಗಡಹಳ್ಳಿ ಗ್ರಾಮದಲ್ಲಿ ಇರುವ ದಂಡಿನಮ್ಮ ಕೆರೆ ಅಭಿವೃದ್ಧಿ ಹಾಗೂ ಒತ್ತುವರಿಯಾಗಿರುವ ಜಾಗವನ್ನು ತೆರವುಗೊಳಿಸುವಂತೆ ಸ್ಥಳೀಯ ದಂಡಿನಮ್ಮ ಮತ್ತು ಬಸವೇಶ್ವರ ದೇವಾಲಯ ಸಮಿತಿ ಅಧ್ಯಕ್ಷ ಕೆ.ಕೆ. ಭೀಮಯ್ಯ ಒತ್ತಾಯ ಮಾಡಿದ್ದಾರೆ.
ಈಗಾಗಲೇ ಕಾವೇರಿ ನಿಗಮದ ವತಿಯಿಂದ ಅನೇಕ ಕಾಮಗಾರಿಗಳನ್ನು ಕೈಗೊಂಡಿರುವಂತೆ ಈ ಸಾಲಿನಲ್ಲಿ ಪುರಾತನ ಹಿನ್ನೆಲೆಯುಳ್ಳ ದಂಡಿನಮ್ಮ ಕೆರೆಯನ್ನು ಅಭಿವೃದ್ಧಿ ಪಡಿಸುವಂತೆ ಒತ್ತಾಯಿಸಿದ್ದಾರೆ. ಈ ಬಗ್ಗೆ ಸರ್ವೆ ನಡೆಸಲು ಜಿಲ್ಲಾಧಿಕಾರಿಗಳು ಆದೇಶಿಸಿದ್ದರೂ ಸಮರ್ಪಕವಾದ ಸರ್ವೆ ಕಾರ್ಯ ನಡೆದಿಲ್ಲ. ಸಂಬಂಧಿಸಿದ ಅಧಿಕಾರಿಗಳು ಸರ್ವೆ ಕಾರ್ಯ ನಡೆಸುವುದರ ಜೊತೆಗೆ ಕೆರೆಯ ಅಭಿವೃದ್ಧಿಗೆ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.