ಸಿದ್ದಾಪುರ, ಜ. 17: ರೈತ ಹಾಗೂ ಕಾರ್ಮಿಕರ ಸಮಸ್ಯೆಗಳಿಗೆ ಪರಿಹಾರವನ್ನು ಒದಗಿಸಿ ಕೊಡುವ ನಿಟ್ಟಿನಲ್ಲಿ ರೈತ ಮತ್ತು ಕಾರ್ಮಿಕರ ರಕ್ಷಣಾ ವೇದಿಕೆಯನ್ನು ಅಸ್ತಿತ್ವಕ್ಕೆ ತರಲಾಗಿದ್ದು ಸಂಘಟನೆಯ ಉದ್ಘಾಟನೆ ತಾ.21ರಂದು ಬೆಳಿಗ್ಗೆ 10.30ಕ್ಕೆ ಮಡಿಕೇರಿಯ ಕೋಟೆ ಮಹಿಳಾ ಸಮಾಜದಲ್ಲಿ ನಡೆಯಲಿದೆ ಎಂದು ಸಂಘಟನೆಯ ಜಿಲ್ಲಾಧ್ಯಕ್ಷ ಶಶಿ ಕುಮಾರ್ ತಿಳಿಸಿದ್ದಾರೆ.

ಕಾರ್ಯಕ್ರಮದ ಕುರಿತು ಮಾಹಿತಿ ನೀಡಿದ ಅವರು ಸಂಘಟನೆಯು ರೈತರಿಗೆ ಮತ್ತು ಕಾರ್ಮಿಕರಿಗೆ ಭದ್ರತೆ ಒದಗಿಸುವ ಹಾಗೂ ಅವರ ಸಮಸ್ಯೆಗಳನ್ನು ಬಗೆಹರಿಸಿ ಅವರುಗಳಿಗೆ ನ್ಯಾಯ ಸಿಗಲು ಶ್ರಮಿಸಲಿದೆ. ಕರ್ನಾಟಕ ಪ್ರಾಂತ್ಯ ರೈತ ಮತ್ತು ಕಾರ್ಮಿಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷ ಜವರೇಗೌಡ ಹಾಗೂ ಪ್ರಧಾನ ಕಾರ್ಯದರ್ಶಿ ದೇವರಾಜ್ ಉದ್ಘಾಟನೆ ಮಾಡಲಿದ್ದಾರೆ. ಕಾರ್ಯಕ್ರಮಕ್ಕೆ ಅತಿಥಿಗಳಾಗಿ ವಿವಿಧ ಜಿಲ್ಲೆಯ ಜಿಲ್ಲಾಧ್ಯಕ್ಷರುಗಳು, ಪದಾಧಿಕಾರಿಗಳು, ಸದಸ್ಯರುಗಳು ಆಗಮಿಸುತ್ತಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಮಿಕರು ರೈತರು ಆಗಮಿಸಲಿದ್ದಾರೆ ಎಂದು ಶಶಿಕುಮಾರ್ ಮಾಹಿತಿ ನೀಡಿದ್ದಾರೆ.