ಗೋಣಿಕೊಪ್ಪಲು, ಜ.17: ಕಳೆದ ಒಂದೂವರೇ ವರ್ಷ ಹಿಂದೆ ಕಾಂಗ್ರೆಸ್ ತೊರೆದು ಜಾತ್ಯತೀತ ಜನತಾದಳ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಕಗೊಂಡಿದ್ದ; ಮಾಂಗೇರ ಪದ್ಮಿನಿ ಪೊನ್ನಪ್ಪ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ರಾಜೀನಾಮೆ ಪತ್ರವನ್ನು ಜೆಡಿಎಸ್ ರಾಜ್ಯಾಧ್ಯಕ್ಷರಿಗೆ ಸಲ್ಲಿಸುವ ಮೂಲಕ ಅನಿವಾರ್ಯ ಕಾರಣಗಳಿಂದ ಪಕ್ಷದಲ್ಲಿ ಮುಂದುವರೆಯಲು ಸಾಧ್ಯವಿಲ್ಲ ಎಂದು ತಿಳಿಸಿದ್ದಾರೆ.