ಮಡಿಕೇರಿ, ಜ. 18: ಕರ್ನಾಟಕ ಯಕ್ಷಗಾನ ಅಕಾಡೆಮಿಯು ಯಕ್ಷಗಾನ (ತೆಂಕು, ಬಡಗು ಬಡಾಬಡಗು, ಯಕ್ಷಗಾನ ಗೊಂಬೆಯಾಟ), ಮೂಡಲಪಾಯ ಯಕ್ಷಗಾನ, ಕೇಳಿಕೆ, ಘಟ್ಟದಕೋರೆ ಮತ್ತು ತಾಳಮದ್ದಲೆ, ಇತ್ಯಾದಿ ಕಲಾ ಪ್ರಕಾರಗಳಲ್ಲಿ 2019ನೇ ಸಾಲಿನ ಕ್ಯಾಲೆಂಡರ್ ವರ್ಷದಲ್ಲಿ (ದಿನಾಂಕ:1.1.2019 ರಿಂದ 31.12.2019ರ ಒಳಗೆ) ಪ್ರಕಟಿಸಿರುವ ಪುಸ್ತಕಗಳನ್ನು ಬಹುಮಾನಕ್ಕೆ ಆಯ್ಕೆ ಮಾಡಲು ಲೇಖಕರಿಂದ / ಪ್ರಕಾಶಕರಿಂದ ಅರ್ಜಿ ಆಹ್ವಾನಿಸಲಾಗಿದೆ.
ಆಯ್ಕೆಯಾದ ಪುಸ್ತಕಕ್ಕೆ ರೂ. 25 ಸಾವಿರಗಳ ಬಹುಮಾನವನ್ನು ನೀಡಲಾಗುವುದು. ಯಕ್ಷಗಾನದ ವಿವಿಧ ಆಯಾಮಗಳ ಬಗ್ಗೆ ಸಂಗೀತ, ಆಹಾರ್ಯ, ಅಭಿನಯ, ಸಂಶೋಧನೆ, ವಿಮರ್ಶೆ, ಜೀವನ ಚರಿತ್ರೆ, ಪ್ರಸಂಗ ಪುಸ್ತಕ ಇತ್ಯಾದಿ ಪ್ರಕಾರಗಳನ್ನು ಒಳಗೊಂಡ ಪುಸ್ತಕಗಳನ್ನು ಬಹುಮಾನಕ್ಕಾಗಿ ಆಹ್ವಾನಿಸಿದೆ. ಪುಸ್ತಕ ಬಹುಮಾನಕ್ಕೆ ಸಲ್ಲಿಸುವ ಪುಸ್ತಕವನ್ನು ಪಠ್ಯಕ್ಕಾಗಿ ಸಿದ್ಧಪಡಿಸಿರಬಾರದು. ಸಂಪಾದಿತ, ಅಭಿನಂದನ ಕೃತಿಯಾಗಿರಬಾರದು, ಸ್ವರಚಿತವಾಗಿರಬೇಕು. ಪ್ರಥಮ ಮುದ್ರಣ ಆವೃತ್ತಿಯಾಗಿರಬೇಕು.
ಬಹುಮಾನಕ್ಕೆ ಪುಸ್ತಕಗಳನ್ನು ಕಳುಹಿಸುವವರು ರಿಜಿಸ್ಟ್ರಾರ್, ಕರ್ನಾಟಕ ಯಕ್ಷಗಾನ ಅಕಾಡೆಮಿ, ಕನ್ನಡ ಭವನ, ಎರಡನೇ ಮಹಡಿ, ಚಾಲುಕ್ಯ ವಿಭಾಗ, ಜೆ.ಸಿ. ರಸ್ತೆ, ಬೆಂಗಳೂರು 560002, ಇವರಿಗೆ 2020ರ ಫೆಬ್ರವರಿ 7 ರೊಳಗೆ ಅರ್ಜಿಯೊಂದಿಗೆ ಪುಸ್ತಕದ ನಾಲ್ಕು ಪ್ರತಿಗಳನ್ನು ಕಡ್ಡಾಯವಾಗಿ ಕಳುಹಿಸುವುದು. ಯಾವುದೇ ಕಾರಣಕ್ಕೂ ಪುಸ್ತಕಗಳನ್ನು ಹಿಂದಿರುಗಿಸಲಾಗುವುದಿಲ್ಲ. ಹೆಚ್ಚಿನ ವಿವರಗಳನ್ನು ಹಾಗೂ ಅರ್ಜಿಯನ್ನು ಕಚೇರಿಯ ವೇಳೆಯಲ್ಲಿ ಅಕಾಡೆಮಿಯಿಂದ (ದೂ:080-22113146) ಪಡೆಯಬಹುದು ಎಂದು ಕರ್ನಾಟಕ ಯಕ್ಷಗಾನ ಅಕಾಡೆಮಿಯ ರಿಜಿಸ್ಟ್ರಾರ್