ಮಡಿಕೇರಿ, ಜ. 17: ಕೊಡಗು ಜಿಲ್ಲೆಯ ವಿವಿಧ ಸಿ.ಜೆ. ಮತ್ತು ಜೆ.ಎಂ.ಎಫ್.ಸಿ. ನ್ಯಾಯಾಲಯಗಳಲ್ಲಿ ಖಾಲಿ ಇರುವ ಸಹಾಯಕ ಸರ್ಕಾರಿ ಅಭಿಯೋಜಕರ ಹುದ್ದೆಗಳಲ್ಲಿ ಗುತ್ತಿಗೆ ಆಧಾರದಲ್ಲಿ ತಾತ್ಕಾಲಿಕವಾಗಿ ಸಹಾಯಕ ಸರ್ಕಾರಿ ಅಭಿಯೋಜಕರಾಗಿ ಕೆಲಸ ನಿರ್ವಹಿಸಲು ಆಸಕ್ತಿವುಳ್ಳ ಅರ್ಹ ವಕೀಲರುಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಹ ವಕೀಲರು ಅರ್ಜಿಯನ್ನು ಲಗತ್ತುಗಳೊಂದಿಗೆ ಗುತ್ತಿಗೆ ಆಧಾರದ ಮೇಲೆ ಸಹಾಯಕ ಸರ್ಕಾರಿ ಅಭಿಯೋಜಕರ ನೇಮಕ ಮಾಡುವ ಆಯ್ಕೆ ಸಮಿತಿಯ ಅಧ್ಯಕ್ಷರು /ಜಿಲ್ಲಾಧಿಕಾರಿಗಳು ಇವರಿಗೆ ಸಲ್ಲಿಸಲು ತಾ. 21 ಕೊನೆಯ ದಿನವಾಗಿರುತ್ತದೆ.
ಗುತ್ತಿಗೆ ಆಧಾರದ ಮೇಲೆ ಸೇವೆ ಸಲ್ಲಿಸುವ ಅರ್ಹ ಅಭ್ಯರ್ಥಿಗಳಿಗೆ ಸಂಚಿತ ಸಂಭಾವನೆಯಾಗಿ ರೂ. 30 ಸಾವಿರ, ಸೇವೆಗೆ ಪೂರಕವಾಗಿ ಅಗತ್ಯವಿರುವ ಸಿಬ್ಬಂದಿ ವೆಚ್ಚಕ್ಕಾಗಿ ರೂ. 5 ಸಾವಿರ ಒಟ್ಟು ರೂ. 35 ಸಾವಿರವನ್ನು ಪಡೆಯಲು ಅರ್ಹರಾಗಿರುತ್ತಾರೆ
ಖಾಲಿ ಇರುವ ಸಹಾಯಕ ಸರ್ಕಾರಿ ಅಭಿಯೋಜಕರುಗಳ ವಿವರ ಹಾಗೂ ನ್ಯಾಯಾಲಯಗಳ ಹೆಸರು: ಮಡಿಕೇರಿಯ ಪ್ರಧಾನ ಸಿ.ಜೆ. ಮತ್ತು ಜೆ.ಎಂ.ಎಫ್.ಸಿ. ನ್ಯಾಯಾಲಯ 1, ಪೊನ್ನಂಪೇಟೆಯ ಸಿ.ಜೆ. ಮತ್ತು ಜೆ.ಎಂ.ಎಫ್.ಸಿ. ನ್ಯಾಯಾಲಯ 1, ಸೋಮವಾರಪೇಟೆಯ ಸಿ.ಜೆ. ಮತ್ತು ಜೆ.ಎಂ.ಎಫ್.ಸಿ. ನ್ಯಾಯಾಲಯ 1, ಕುಶಾಲನಗರದ ಸಿ.ಜೆ. ಮತ್ತು ಜೆ.ಎಂ.ಎಫ್.ಸಿ. ನ್ಯಾಯಾಲಯ 1, ವೀರಾಜಪೇಟೆಯ ಸಿ.ಜೆ. ಮತ್ತು ಜೆ.ಎಂ.ಎಫ್.ಸಿ. ನ್ಯಾಯಾಲಯ 1.
ಜಿಲ್ಲೆಗೆ ಸಂಬಂಧಿಸಿದ ಸಹಾಯಕ ಸರ್ಕಾರಿ ಅಭಿಯೋಜಕರ ಹುದ್ದೆಗೆ ಅರ್ಜಿ ಸಲ್ಲಿಸಲು ಈ ಜಿಲ್ಲೆಯ ಯಾವುದೇ ನ್ಯಾಯಾಲಯಗಳಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಲಾಗಿರುವ ಕೊನೆಯ ದಿನಾಂಕಕ್ಕೆ 3 ವರ್ಷಗಳಿಗೆ ಕಡಿಮೆ ಇಲ್ಲದಂತೆ ವಕೀಲರಾಗಿ ಸೇವೆ ಸಲ್ಲಿಸಿರಬೇಕು. ಸಾಮಾನ್ಯ ಅಭ್ಯರ್ಥಿಗಳಿಗೆ 37 ವರ್ಷ, ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ 40 ವರ್ಷ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಪ್ರವರ್ಗ 1ರ ಅಭ್ಯರ್ಥಿಗಳಿಗೆ 42 ವರ್ಷ.
ವಯೋಮಿತಿ ಬಗ್ಗೆ ಎಸ್‍ಎಸ್‍ಎಲ್‍ಸಿ ಮೂಲ ಪ್ರಮಾಣ ಪತ್ರವನ್ನು ಪರಿಗಣಿಸಲಾಗುತ್ತಿದ್ದು, ದೃಢೀಕೃತ ಅಂಕಪಟ್ಟಿಯನ್ನು ಅರ್ಜಿಯೊಂದಿಗೆ ಲಗತ್ತಿಸಬೇಕು. ವಿದ್ಯಾರ್ಹತೆ ಬಗ್ಗೆ ಎಲ್‍ಎಲ್‍ಬಿ ಯ ಎಲ್ಲಾ ಸೆಮಿಸ್ಟರ್‍ಗಳ ಅಂಕ ಪಟ್ಟಿಯನ್ನು ಸಲ್ಲಿಸಬೇಕು. ಮೀಸಲಾತಿ ಕೋರುವ ಅಭ್ಯರ್ಥಿಗಳು ಸಂಬಂಧಿಸಿದ ನಮೂನೆಗಳಲ್ಲಿಯೇ ಮೀಸಲಾತಿ ಪ್ರಮಾಣ ಪತ್ರಗಳನ್ನು ಸಲ್ಲಿಸಬೇಕು. ಅಭ್ಯರ್ಥಿಗಳು ವಕೀಲವೃತಿ ನಡೆಸುತ್ತಿರುವ ಬಗ್ಗೆ ಆಯಾ ನ್ಯಾಯಾಲಯದ ಪೀಠಾಧಿಕಾರಿಗಳಿಂದ ಪ್ರಮಾಣ ಪತ್ರಗಳನ್ನು ಪಡೆದು ಸಲ್ಲಿಸಬೇಕು ಮತ್ತು ವಕೀಲರ ಸಂಘದಿಂದ ಪಡೆದಿರುವ ನೋಂದಣಿ ಪ್ರಮಾಣ ಪತ್ರವನ್ನು ಕಡ್ಡಾಯವಾಗಿ ಸಲ್ಲಿಸಬೇಕು.