ಕೂಡಿಗೆ, ಜ. 16: ಮಡಿಕೇರಿ ಕ್ಷೇತ್ರದ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಅವರು ಕಾವೇರಿ ನೀರಾವರಿ ನಿಗಮದ ವತಿಯಿಂದ 13.57.ಕೋಟಿ ರೂ ವೆಚ್ಚದ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದರು. ಕಾವೇರಿ ನೀರಾವರಿ ನಿಗಮದಿಂದ ಯಡವನಾಡು ಗ್ರಾಮ ಕೆಲವು ಉಪ ರಸ್ತೆಗಳ ಕಾಂಕ್ರೀಟ್ ರಸ್ತೆ, ಹುಲುಗುಂದದ ಯಡವನಾಡು ರಸ್ತೆ ದುರಸ್ತಿ, ಶಿರಂಗಾಲ, ತೂರೆನೂರು , ಹೆಬ್ಬಾಲೆ, ಕೂಡಿಗೆ, ಗುಡ್ಡೆಹೂಸೂರು. ಬೆಟ್ಟಗೇರಿ, ಗ್ರಾಮ ಪಂಚಾಯಿತಿ ವ್ಯಾಪ್ತಿಗಳಲ್ಲಿ ಶಾಸಕ ಎಂ.ಪಿ. ಅಪ್ಪಚ್ವು ರಂಜನ್ ಭೂಮಿ ಪೂಜೆ ನೆರವೇರಿಸಿ ಕಾಮಗಾರಿಗೆ ಚಾಲನೆ ನೀಡಿದರು. ನಂತರ ಸುದ್ದಿಗಾರೊಂದಿಗೆ ಮಾತನಾಡುತ್ತಾ ಕಾವೇರಿ ನೀರಾವರಿ ನಿಗಮದಿಂದ ಈ ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ. ಮುಂದಿನ ದಿನಗಳಲ್ಲಿ ನಿಗಮದ ವತಿಯಿಂದ ಪರಿಶಿಷ್ಟ ಯೋಜನೆಯ ಅಡಿಯಲ್ಲಿ 10ಕೋಟಿ ಕಾಮಗಾರಿಯನ್ನು ಕೈಗೊಳ್ಳಲಾಗುವುದು. ಪ್ರತಿಯೊಂದು ಹಳ್ಳಿಗೂ ರಸ್ತೆಯ ವ್ಯವಸ್ಥೆ ಮಾಡಲಾಗುವುದು ಎಂದರು.

ಈ ಸಂದÀರ್ಭದಲ್ಲಿ ಜಿಲ್ಲಾ ಪಂಚಾಯತಿ ಸದಸ್ಯರಾದ ಶ್ರೀನಿವಾಸ, ಕೆ. ಆರ್. ಮಂಜುಳಾ ತಾಲೂಕು ಪಂಚಾಯತಿ ಸದಸ್ಯರುಗಳಾದ. ಸಬಿತ ಚೆನ್ನಕೇಶವ, ಜಯಣ್ಣ. ಗಣೇಶ್ ಸೇರಿದಂತೆ ಶಿರಂಗಾಲ ಹೆಬ್ಬಾಲೆ, ತೂರೆನೂರು, ಕೂಡಿಗೆ, ಗ್ರಾಮ ಪಂಚಾಯತಿ ಅಧ್ಯಕ್ಷರು, ಉಪಾಧ್ಯಕ್ಷರು, ಸರ್ವ ಸದಸ್ಯರು ಸೇರಿದಂತೆ ಆಯಾ ಗ್ರಾಮದ ದೇವಾಲಯ ಸಮಿತಿಯ ಅಧ್ಯಕ್ಷರು ಹಾರಂಗಿ ನೀರಾವರಿ ಇಲಾಖೆಯ ಸಹಾಯಕ ಕಾರ್ಯಪಾಲಕ ಅಭಿಯಂತರ ರಾಜೇಗೌಡ, ಇಂಜಿನಿಯರ್ ನಾಗರಾಜು ಸಹಾಯಕ ಇಂಜಿನಿಯರ್ ಕಿರಣ್ ಸೇರಿದಂತೆ ಇಲಾಖೆಯ ಅಧಿಕಾರಿ ವರ್ಗದವರು ಹಾಗೂ ರೈತರು ಹಾಜರಿದ್ದರು.