ಸೋಮವಾರಪೇಟೆ, ಜ. 19: ಗ್ರಾಮೀಣ ಪ್ರದೇಶದಲ್ಲಿ ಆಯೋಜನೆಗೊಳ್ಳುವ ಕ್ರೀಡಾಕೂಟಗಳು ಪರಸ್ಪರ ಸಾಮರಸ್ಯ ಮೂಡಿಸಲು ಸಹಕಾರಿಯಾಗುತ್ತವೆ ಎಂದು ಮಡಿಕೇರಿ ವಿಧಾನ ಸಭಾ ಕ್ಷೇತ್ರದ ಶಾಸಕ ಎಂ.ಪಿ. ಅಪ್ಪಚ್ಚುರಂಜನ್ ಹೇಳಿದರು.
ಸಮೀಪದ ಕಾಗಡಿಕಟ್ಟೆಯ ಅಯ್ಯಪ್ಪ ಕಾಲೋನಿ ಮೈದಾನದಲ್ಲಿ ಕಾವೇರಿ ಫ್ರೆಂಡ್ಸ್ ವತಿಯಿಂದ ಆಯೋಜಿಸ ಲಾಗಿದ್ದ ಕ್ರಿಕೆಟ್ ಪಂದ್ಯಾಟದ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಅವರು, ವಿದ್ಯಾರ್ಥಿ ಜೀವನದಲ್ಲಿಯೇ ಕ್ರೀಡೆಯನ್ನು ಮೈಗೂಡಿಸಿಕೊಂಡಲ್ಲಿ ಉತ್ತಮ ಭವಿಷ್ಯ ಕಟ್ಟಿಕೊಳ್ಳಬಹುದು ಎಂದರು.
ಕ್ರೀಡೆಗಳು ದೈಹಿಕ ಹಾಗೂ ಮಾನಸಿಕ ಆರೋಗ್ಯವನ್ನು ಸಮತೋಲನದಲ್ಲಿ ಇಟ್ಟುಕೊಳ್ಳಲು ಸಹಕಾರಿಯಾಗುತ್ತದೆ.
ಸ್ಪರ್ಧಾ ಮನೋಭಾವದಿಂದ ಕ್ರೀಡಾಕೂಟದಲ್ಲಿ ಪಾಲ್ಗೊಳ್ಳಬೇಕು. ಇತರ ಕ್ರೀಡಾ ಪ್ರತಿಭೆಗಳಿಗೆ ಪ್ರೋತ್ಸಾಹ ನೀಡಬೇಕು ಎಂದು ಅಭಿಪ್ರಾಯಿಸಿದರು.
ಕಾರ್ಯಕ್ರಮದಲ್ಲಿ ಸಂಘದ ಅಧ್ಯಕ್ಷ ಪಿ.ಬಿ. ಸುರೇಶ್, ಪಟ್ಟಣ ಪಂಚಾಯಿತಿ ಸದಸ್ಯ ಪಿ.ಕೆ. ಚಂದ್ರು, ಪ್ರಮುಖರಾದ ಕೆ.ಟಿ. ಕುಮಾರ್ ಸೇರಿದಂತೆ ಇತರರು ಕ್ರೀಡಾಕೂಟದಲ್ಲಿ ಟೀಮ್ಸ್ ಮ್ಯಾಕ್ಸ್‍ವೆಲ್ ಪ್ರಥಮ ಹಾಗೂ ಗೋಪಾಲಪುರದ ಕೂರ್ಗ್ ಹಂಟರ್ಸ್ ದ್ವಿತೀಯ ಸ್ಥಾನ ಪಡೆಯಿತು. ಪ್ರಥಮ ಬಹುಮಾನವಾಗಿ 20 ಸಾವಿರ ನಗದು, ದ್ವಿತೀಯ ಬಹುಮಾನ 10 ಸಾವಿರ ನಗದು ಹಾಗೂ ಟ್ರೋಫಿಯನ್ನು ವಿತರಿಸಲಾಯಿತು.