ಮಡಿಕೇರಿ, ಜ. 19: ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ತಾ. 20 ರಂದು (ಇಂದು) ಬೆಳಗ್ಗೆ 10.30 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಉದ್ಯೋಗ ಮೇಳ ನಡೆಯಲಿದೆ.
ಎಸ್‍ಎಸ್‍ಎಲ್‍ಸಿ, ಪಿಯುಸಿ, ಐಟಿಐ, ಡಿಪ್ಲೋಮ, ಯಾವುದೇ ಪದವಿ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಈ ಉದ್ಯೋಗಮೇಳದಲ್ಲಿ ಭಾಗವಹಿಸಬಹುದು. ಅಭ್ಯರ್ಥಿಗಳು ವಿದ್ಯಾರ್ಹತೆಯ ಮೂಲ ದಾಖಲಾತಿಗಳು, ಅನುಭವ ಪ್ರಮಾಣಪತ್ರ (ಅನ್ವಯಿಸುವವರಿಗೆ ಮಾತ್ರ) ಹಾಗೂ ಸ್ವ-ವಿವರಗಳ ಪ್ರತಿಗಳೊಂದಿಗೆ ಉದ್ಯೋಗಮೇಳದಲ್ಲಿ ಹಾಜರಾಗುವಂತೆ ತಿಳಿಸಲಾಗಿದೆ.