ಮಡಿಕೇರಿ, ಜ. 19 : ಕಾಲೇಜು ಶಿಕ್ಷಣ ಇಲಾಖೆ, ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ರೆಡ್ ರಿಬ್ಬನ್, ರೆಡ್ ಕ್ರಾಸ್, ರಾ.ಸೇ.ಯೋಜನಾ ಘಟಕದ ವತಿಯಿಂದ ತಾ. 20 ರಂದು (ಇಂದು) ಮಧ್ಯಾಹ್ನ 1.30 ಗಂಟೆಗೆ ಏಡ್ಸ್ ಜಾಗೃತಿ ಉಪನ್ಯಾಸ ಕಾರ್ಯಕ್ರಮ ನಡೆಯಲಿದೆ.

ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲೆ ಪ್ರೊ. ಚಿತ್ರಾ ವೈ. ಜಿಲ್ಲಾ ಏಡ್ಸ್ ನಿಯಂತ್ರಣಾಧಿಕಾರಿ ಸುನಿತಾ ಮುತ್ತಣ್ಣ, ಕಾಲೇಜಿನ ಅರ್ಥಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ. ಕೆ.ಸಿ. ದಯಾನಂದ ಇತರರು ಪಾಲ್ಗೊಳ್ಳಲಿದ್ದಾರೆ.