ಕೂಡಿಗೆ, ಜ. 19: ಕೂಡಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ನೀರಾವರಿ ಇಲಾಖೆ, ಲೋಕೋಪಯೋಗಿ ಇಲಾಖೆ ಮತ್ತು ಪ್ರಕೃತಿ ವಿಕೋಪದ ಅನುದಾನದಲ್ಲಿ ರೂ. 30 ಲಕ್ಷಕ್ಕೂ ಅಧಿಕ ಅನುದಾನದ ಕಾಮಗಾರಿಯನ್ನು ನಡೆಸಲಾಗಿದೆ. ಮುಂದಿನ ದಿನಗಳಲ್ಲಿ ಉಪರಸ್ತೆಗಳ ಜೋಡಣೆಗೆ ಶಾಸಕರ ಅನುದಾನದಲ್ಲಿ ಹೆಚ್ಚು ಹಣವನ್ನು ನೀಡುವುದಾಗಿ ಶಾಸಕ ಎಂ.ಪಿ. ಅಪ್ಪಚ್ಚುರಂಜನ್ ಭರವಸೆ ನೀಡಿದರು.
ಕೂಡಿಗೆ ಗ್ರಾಮ ಪಂಚಾಯಿತಿಗೆ ಸ್ವಚ್ಛ ಭಾರತ್ ಯೋಜನೆಯಡಿಯಲ್ಲಿ ಕಸ ವಿಲೇವಾರಿಗೆ ಟ್ರ್ಯಾಕ್ಟರ್ ಅನ್ನು ಹಸ್ತಾಂತರಿಸಿದ ಸಂದರ್ಭ ಮಾತನಾಡಿದರು. ಮುಂದುವರೆದು ಮಾತನಾಡಿದ ಅವರು, ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕಸ ವಿಲೇವಾರಿ ಘಟಕವನ್ನು ಸೂಚಿಸಿದ ಜಾಗದಲ್ಲಿಯೇ ಕಸವನ್ನು ವಿಲೇವಾರಿ ಮಾಡಬೇಕು. ವಸತಿ ರಹಿತರಿಗೆ ವಸತಿ ನೀಡುವ ಬಗ್ಗೆ ಸ್ಥಗಿತಗೊಂಡಿರುವ ಅನುದಾನವನ್ನು ನೀಡುವುದಾಗಿ ತಿಳಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪ್ರೇಮಲೀಲ ವಹಿಸಿದ್ದರು. ವೇದಿಕೆಯಲ್ಲಿ ಜಿಲ್ಲಾ ಪಂಚಾಯಿತಿ ಸದಸ್ಯೆ ಕೆ.ಆರ್. ಮಂಜುಳಾ ಸೇರಿದಂತೆ ಗ್ರಾ.ಪಂ. ಸದಸ್ಯರಾದ ಮೋಹಿನಿ, ಕೆ.ವೈ. ರವಿ, ಕೃಷ್ಣ, ಕೆ.ಬಿ. ರಾಮಚಂದ್ರ, ರತ್ನಮ್ಮ, ಹೆಚ್.ಎಸ್. ರವಿ, ಪುಷ್ಪ, ಜಯಶ್ರೀ, ಚಂದ್ರಿಕಾ, ಕಲ್ಪನ, ಮಂಜಯ್ಯ, ಧನ್ಯ, ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ಅಶ್ವಿನಿ, ಕಾರ್ಯದರ್ಶಿ ಕಾವ್ಯ ಮತ್ತಿತರರು ಇದ್ದರು.