ನಾಪೆÇೀಕ್ಲು, ಜ. 19: ಕಕ್ಕಬೆ ಕೃಷಿ ಪತ್ತಿನ ಸಹಕಾರ ಸಂಘದ ಸಮೀಪದ ತಡೆಗೋಡೆ ನಿರ್ಮಾಣಕ್ಕೆ ಸಣ್ಣ ನೀರಾವರಿ ಯೋಜನೆಯಿಂದ ಸುಮಾರು ರೂ. 50 ಲಕ್ಷ ವೆಚ್ಚದ ಕಾಮಗಾರಿಗೆ ವೀರಾಜಪೇಟೆ ಶಾಸಕ ಕೆ.ಜಿ. ಬೋಪಯ್ಯ ಅವರು ಭೂಮಿಪೂಜೆ ನೆರವೇರಿಸಿ ಮಾತನಾಡಿದ ಅವರು, ಸಂಘ-ಸಂಸ್ಥೆಗಳ ಅಭಿವೃದ್ಧಿಗೆ ನಾಡಿನ ಜನರ ಸಹಕಾರ ಮುಖ್ಯವಾಗಿದ್ದು, ಅಭಿವೃದ್ಧಿಗೆ ಎಲ್ಲ್ಲರೂ ಕೈಜೋಡಿಸಬೇಕೆಂದರು.
ಈ ಸಂದರ್ಭ ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಬಿ.ಎ. ಹರೀಶ್, ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷ ನೆಲ್ಲಚಂಡ ಕಿರಣ್ ಕಾರ್ಯಪ್ಪ, ತಾಲೂಕು ಪಂಚಾಯಿತಿ ಅಧ್ಯಕ್ಷೆ ತೆಕ್ಕಡ ಶೋಭಾ ಮೋಹನ್, ಉಪಾಧ್ಯಕ್ಷ ಬೊಳಿಯಾಡಿರ ಸಂತು ಸುಬ್ರಮಣಿ, ಗ್ರಾಮ ಪಂಚಾಯಿತಿ ಅಧ್ಯಕ್ಷ ಶೈಲಾ, ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಕಲಿಯಾಟಂಡ ಎ. ತಮ್ಮಯ್ಯ, ಸಂಘದ ನಿರ್ದೇಶಕರುಗಳಾದ ಕಲಿಯಂಡ ಸುನಂದ, ಬಡಕಡ ಸುರೇಶ್ ಬೆಳ್ಯಪ್ಪ, ಅಲ್ಲಾರಂಡ ಸನ್ನು, ಉದಿಯಂಡ ಸುರ ನಾಣಯ್ಯ, ಮತ್ತಿತರರು ಇದ್ದರು.