ಮಡಿಕೇರಿ, ಜ. 19: ಕೊಡಗು ಜಿಲ್ಲೆಯಾದ್ಯಂತ ಇಂದು ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ ನಡೆದಿದೆ. ಜಿಲ್ಲೆಯಲ್ಲಿ ಶೇ. 93.32 ಸಾಧನೆಯಾಗಿದ್ದು, ಜಿಲ್ಲಾ ವ್ಯಾಪ್ತಿಯಲ್ಲಿ ಅಂಗನವಾಡಿ ಕೇಂದ್ರಗಳು, ಆರೋಗ್ಯ ಕೇಂದ್ರಗಳು, ಬಸ್ ನಿಲ್ದಾಣಗಳು ಸೇರಿದಂತೆ ಅಲ್ಲಲ್ಲಿ ಪೋಲಿಯೋ ಲಸಿಕಾ ಕೇಂದ್ರಗಳನ್ನು ತೆರೆಯಲಾಗಿತ್ತು.
ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮದ ಅಂಗವಾಗಿ ಮಡಿಕೇರಿ ನಗರದ ಹಿಲ್ ರಸ್ತೆಯ ಅಂಗನವಾಡಿಯಲ್ಲಿ ಶಾಸಕ ಅಪ್ಪಚ್ಚು ರಂಜನ್ ಮಕ್ಕಳಿಗೆ ಲಸಿಕೆ ಹಾಕುವ ಮೂಲಕ ಚಾಲನೆ ನೀಡಿದರು.ಜಿ.ಪಂ. ಅಧ್ಯಕ್ಷ ಬಿ.ಎ. ಹರೀಶ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಕೆ. ಮೋಹನ್, ರಾಜ್ಯ ನೋಡೆಲ್ ಅಧಿಕಾರಿ ಡಾ. ನಂದ, ಆರ್‍ಸಿಎಚ್ ಅಧಿಕಾರಿ ಡಾ. ಗೋಪಿನಾಥ, ಡಾ. ಆನಂದ, ಡಾ. ಪುರುಷೋತ್ತಮ, ಡಾ. ರಾಮಚಂದ್ರ, ಡಾ. ಡೆವಿನ್, ಆರೋಗ್ಯ ಶಿಕ್ಷಣಾಧಿಕಾರಿ ರಮೇಶ್, ರೋಟರಿ ಕ್ಲಬ್‍ನ ಅಧ್ಯಕ್ಷ ರತನ್ ತಮ್ಮಯ್ಯ, ರೋಟರಿ ಮಿಸ್ಟ್ ಹಿಲ್ಸ್ ಅಧ್ಯಕ್ಷ ಜಗದೀಶ್, ಲಯನ್ಸ್ ಕ್ಲಬ್‍ನ ಅಧ್ಯಕ್ಷ ಮೋಹನ್ ಕುಮಾರ್, ಇನ್ನರ್ ವ್ಹೀಲ್ ಅಧ್ಯಕ್ಷೆ ನಿಷಾ ಹಾಗೂ ರೋಟರಿ ಕ್ಲಬ್‍ನ ಸದಸ್ಯರು, ಇತರರು ಇದ್ದರು.ಸುಂಟಿಕೊಪ್ಪ: ಸುಂಟಿಕೊಪ್ಪ ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಬಸ್‍ನಿಲ್ದಾಣದ ಬಳಿಯಿರುವ ಕೇಂದ್ರ ದಲ್ಲಿ ಮಕ್ಕಳಿಗೆ ಪಲ್ಸ್ ಪೋಲಿಯೋ ಹನಿಯನ್ನು ಗ್ರಾ.ಪಂ. ಅಧ್ಯಕ್ಷೆ ರೋಸ್‍ಮೇರಿ ರಾಡ್ರಿಗಸ್ ನೀಡುವ ಮೂಲಕ ಚಾಲನೆ ನೀಡಿದರು. ಸುಂಟಿಕೊಪ್ಪ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಜೀವನ್, ಆರೋಗ್ಯ ಸಹಾಯಕಿ ಯರು, ದಾದಿಯರು, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯ ಕರ್ತೆಯರು ಮತ್ತಿತರರು ಇದ್ದರು.
*ಗದ್ದೆಹಳ್ಳ ಅಂಗನವಾಡಿ ಕೇಂದ್ರದಲ್ಲಿ ಗ್ರಾ.ಪಂ. ಉಪಾಧ್ಯಕ್ಷ ಪಿ.ಆರ್. ಸುಕುಮಾರ್ ಹಾಗೂ ನಾಗರತ್ನ ಸುರೇಶ್ ಮಕ್ಕಳಿಗೆ ಫಲ್ಸ್ ಪೋಲಿಯೋ ಲಸಿಕೆಯನ್ನು ನೀಡುವ ಮೂಲಕ ಉದ್ಘಾಟಿಸಿದರು.
ಕೂಡಿಗೆ: ಕೂಡಿಗೆ ಸರಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ವತಿಯಿಂದ ಪಲ್ಸ್ ಪೋಲಿಯೋ ಕಾರ್ಯಕ್ರಮ ನಡೆಯಿತು. ಉದ್ಘಾಟನೆ ಯನ್ನು ಕೂಡುಮಂಗಳೂರು ಗ್ರಾಮ ಪಂಚಾಯತಿ ಅಧ್ಯಕ್ಷೆ ಲಕ್ಷ್ಮೀರವಿ ನೆರವೇರಿಸಿದರು. ಈ ಸಂದರ್ಭದಲ್ಲಿ ಕುಶಾಲನಗರ ರೋಟರಿ ಕ್ಲಬ್ ಅಧ್ಯಕ್ಷರು ಸರ್ವ ಸದಸ್ಯರು ಹಾಗೂ ಆರೋಗ್ಯ ಇಲಾಖೆಯ ಸಿಬ್ಬಂದಿ ಇದ್ದರು.
ಶ್ರೀಮಂಗಲ: ಶ್ರೀಮಂಗಲ ಕರುಣಾ ಟ್ರಸ್ಟ್ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪಲ್ಸ್ ಪೋಲಿಯೋ ಕ್ರಾರ್ಯಕ್ರಮ ನಡೆಯಿತು. ಆಸ್ಪತ್ರೆಯ ಅಭಿವೃದ್ಧಿ ಸಮಿತಿಯ ಸದಸ್ಯ ಹಾಗೂ ಶ್ರೀಮಂಗಲ ನಾಗರಿಕ ಹೋರಾಟ ಸಮಿತಿ ಅಧ್ಯಕ್ಷ ಎಂ.ಟಿ. ಕಾರ್ಯಪ್ಪ ಮಗುವಿಗೆ ಪಲ್ಸ್ ಪೋಲಿಯೋ ಹನಿ ಹಾಕಿ ಚಾಲನೆ ನೀಡಿದರು. ಆಸ್ಪತ್ರೆಯ ವೈದ್ಯಾಧಿಕಾರಿ ಮಹದೇವಸ್ವಾಮಿ, ನರ್ಸ್ ಗೀತಾ ಆಡಳಿತಾಧಿಕಾರಿ ಶ್ರೀಕಾಂತ್ ಆಶಾ ಕಾರ್ಯಕರ್ತೆಯರು ಸಿಬ್ಬಂದಿ ಹಾಜರಿದ್ದರು.
ಗುಡ್ಡೆಹೊಸೂರು: ಇಲ್ಲಿನ ಸರಕಾರಿ ಪ್ರಾಥಮಿಕ ಶಾಲಾ ಆವರಣದಲ್ಲಿ ಪಲ್ಸ್ ಪೋಲಿಯೋ ಕೇಂದ್ರ ತೆರೆಯಲಾಗಿತ್ತು. ಈ ಕೇಂದ್ರದ ಉಸ್ತುವಾರಿಯನ್ನು ಸರಕಾರಿ ವೈದÀ್ಯ ಡಾ. ಪ್ರತಾಪ್ ಸಾಗರ್ ವಹಿಸಿದ್ದರು.
ಕಾನೂರು: ಪ್ರಾಥಮಿಕ ಆರೋಗ್ಯ ಕೇಂದ್ರ ಕಾನೂರಿನಲ್ಲಿ ಪಲ್ಸ್ ಪೋಲಿಯೋ ಕಾರ್ಯಕ್ರಮವನ್ನು ಕಾನೂರು
(ಮೊದಲ ಪುಟದಿಂದ) ಗ್ರಾಮ ಪಂಚಾಯಿತಿ ಅಧ್ಯಕ್ಷೆ ಲತಾಕುಮಾರಿ ಉದ್ಘಾಟಿಸಿದರು. ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಮಹಮದ್ ಆಶಿಕ್ ಹಾಗೂ ಆಡಳಿತ ಅಧಿಕಾರಿ ವಿಶ್ವನಾಥ್ ಸಿ.ವಿ. ಮತ್ತು ಗ್ರಾಮಸ್ಥರು ಹಾಜರಿದ್ದರು.
ನಾಪೋಕ್ಲು: ಇಲ್ಲಿನ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಮಕ್ಕಳಿಗೆ ಪಲ್ಸ್ ಪೋಲಿಯೋ ಲಸಿಕೆ ಹಾಕುವ ಕಾರ್ಯಕ್ರಮವನ್ನು ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಕಾಳೆಯಂಡ ಸಾಬಾ ತಿಮ್ಮಯ್ಯ ಉದ್ಘಾಟಿಸಿದರು. ಸಮುದಾಯ ಆರೋಗ್ಯ ಕೇಂದ್ರದ ವೈದ್ಯರಾದ ಡಾ. ಶಿವಕುಮಾರ್, ಡಾ. ಪೂವಯ್ಯ ಹಾಗೂ ಸಿಬ್ಬಂದಿಗಳು ಪಾಲ್ಗೊಂಡಿದ್ದರು.
ಕುಶಾಲನಗರ: ಕುಶಾಲನಗರ ಪಟ್ಟಣ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಪಲ್ಸ್ ಪೋಲಿಯೋ ಲಸಿಕೆ ಹಾಕುವ ಕಾರ್ಯಕ್ರಮ ನಡೆಯಿತು.
ಸರಕಾರಿ ಆಸ್ಪತ್ರೆ, ಸಾರ್ವಜನಿಕ ಸ್ಥಳಗಳಲ್ಲಿ ಲಸಿಕಾ ಕೇಂದ್ರಗಳನ್ನು ತೆರೆಯಲಾಗಿತ್ತು. ಬೆಳಗಿನಿಂದ ಸಂಜೆ ತನಕ ನೂರಾರು ಸಂಖ್ಯೆಯಲ್ಲಿ ಪೋಷಕರು ತಮ್ಮ ಮಕ್ಕಳಿಗೆ ಲಸಿಕೆ ಹಾಕಲು ಕರೆದೊಯ್ಯುವ ದೃಶ್ಯ ಕಂಡುಬಂತು.
ಸೋಮವಾರಪೇಟೆ: ಆರೋಗ್ಯ ಇಲಾಖೆಯಿಂದ ಆಯೋಜನೆಗೊಂಡಿದ್ದ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮದಲ್ಲಿ ಸೋಮವಾರಪೇಟೆ ತಾಲೂಕಿನಾದ್ಯಂತ ಶೇ.89.61 ಸಾಧನೆಯಾಗಿದೆ.
ತಾಲೂಕಿನಲ್ಲಿ 5 ವರ್ಷ ಒಳಪಟ್ಟ 14,166 ಮಕ್ಕಳಿದ್ದು, ಇಂದು ನಡೆದ ಪೊಲೀಯೋ ಲಸಿಕೆ ಹಾಕುವ ಕಾರ್ಯಕ್ರಮದಲ್ಲಿ 12,694 ಮಕ್ಕಳಿಗೆ ಲಸಿಕೆ ಹಾಕಲಾಯಿತು.
ತಾಲೂಕಿನಾದ್ಯಂತ 142 ಲಸಿಕಾ ಕೇಂದ್ರಗಳನ್ನು ತೆರೆಯಲಾಗಿದ್ದು, 596 ಮಂದಿ ಸಿಬ್ಬಂದಿಗಳು ಪೋಲಿಯೋ ಲಸಿಕೆ ಅಭಿಯಾನದಲ್ಲಿ ಭಾಗಿಯಾಗಿದ್ದರು. 184 ಮಂದಿ ಆಶಾ ಕಾರ್ಯಕರ್ತೆಯರು, 284 ಮಂದಿ ಅಂಗನವಾಡಿ ಕಾರ್ಯಕರ್ತೆಯರು, 61 ಆರೋಗ್ಯ ಸಹಾಯಕರು, 29 ಮಂದಿ ಮೇಲ್ವಿಚಾರಕರು ಪಲ್ಸ್ ಪೊಲೀಯೋ ಲಸಿಕೆ ಹಾಕುವ ಕಾರ್ಯದಲ್ಲಿ ಪಾಲ್ಗೊಂಡಿದ್ದರು. ಇವರೊಂದಿಗೆ ಸಾರ್ವಜನಿಕರು ಹಾಗೂ ಸಂಘಸಂಸ್ಥೆಗಳ ಪದಾಧಿಕಾರಿಗಳು, ವಿವಿಧ ಇಲಾಖಾ ಸಿಬ್ಬಂದಿಗಳು ಆರೋಗ್ಯ ಇಲಾಖೆಯೊಂದಿಗೆ ಕೈಜೋಡಿಸಿದ್ದರು.
ತಾಲೂಕಿನ ಎಲ್ಲಾ ಅಂಗನವಾಡಿ ಕೇಂದ್ರ ಸೇರಿದಂತೆ ನಿಗದಿತ ಸ್ಥಳಗಳಲ್ಲಿ ಪೋಲಿಯೋ ಲಸಿಕೆ ಹಾಕಲಾಯಿತು.