*ಗೋಣಿಕೊಪ್ಪಲು, ಜ. 19: ಬಿಜೆಪಿ ತಾಲೂಕು ಅಧ್ಯಕ್ಷ ನೆಲ್ಲೀರ ಚಲನ್ ಕುಮಾರ್ ಅಧ್ಯಕ್ಷತೆಯಲ್ಲಿ ಜೆಡಿಎಸ್ ಪಕ್ಷವನ್ನು ತೊರೆದು ಬಿಜೆಪಿ ಸೇರ್ಪಡೆಗೊಂಡ ಕಾರ್ಯಕರ್ತರನ್ನು ಅಜ್ಜಮಾಡ ಲವ ಕುಶಾಲಪ್ಪ ಅವರನ್ನು ಶಾಲು ಹೊದಿಸಿ ಪಕ್ಷಕ್ಕೆ ಸ್ವಾಗತಿಸಿದರು.
ಈ ಸಂದರ್ಭ ತಾಲೂಕು ಪ್ರಧಾನ ಕಾರ್ಯದರ್ಶಿ ಮಾಚಿಮಂಡ ಸುವಿನ್ ಗಣಪತಿ, ಟಿ. ಶೆಟ್ಟಿಗೇರಿ ಗ್ರಾ.ಪಂ. ಅಧ್ಯಕ್ಷ ಮಚ್ಚಮಾಡ ಸುಮಂತ್, ವರ್ತಕರ ಪ್ರಕೋಷ್ಠದ ತಾಲೂಕು ಅಧ್ಯಕ್ಷ ಚೆಪ್ಪುಡೀರ ಮಾಚಯ್ಯ, ನಿಕಟಪೂರ್ವ ಅಧ್ಯಕ್ಷ ಕುಂಞಂಗಡ ಅರುಣ್ ಭೀಮಯ್ಯ ಸೇರಿದಂತೆ ನೂರಾರು ಕಾರ್ಯಕರ್ತರು ಹಾಜರಿದ್ದರು.