ಕೂಡಿಗೆ, ಜ. 21: ಕ್ಯಾನ್ಸರ್‍ನಂತಹ ಮಾರಕ ರೋಗಗಳ ಬಗ್ಗೆ ಅರಿವಿನ ಕೊರತೆಯಿಂದ ಬಹುತೇಕ ರೋಗಿಗಳು ಅಕಾಲಿಕ ಸಾವಿಗೆ ಈಡಾಗುತ್ತಿದ್ದಾರೆ ಎಂದು ಸೋಮವಾರಪೇಟೆಯ ಸರ್ಕಾರಿ ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಗಳಾದ ಡಾ. ಶ್ರೀನಿವಾಸ್ ಹೇಳಿದರು.ಚಿಕ್ಕ ಅಳುವಾರದಲ್ಲಿರುವ ಮಂಗಳೂರು ವಿಶ್ವವಿದ್ಯಾನಿಲಯ ಜ್ಞಾನ ಕಾವೇರಿ ಸ್ನಾತಕೋತ್ತರ ಕೇಂದ್ರದಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಘಟಕ ಹಾಗೂ ಯೆನಪೋಯ ವಿಶ್ವವಿದ್ಯಾಲ ಯದ ಸಹಯೋಗದೊಂದಿಗೆ ಹಮ್ಮಿ ಕೊಂಡಿದ್ದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಬಹಳಷ್ಟು ಕಾಯಿಲೆಗಳಿಗೆ ತುತ್ತಾಗುತ್ತಿರುವ ಜನರಿಗೆ ಸಾಮಾನ್ಯ ಮಾಹಿತಿಗಳ ಕೊರತೆಗಳು ಕಾರಣವಾಗಿವೆ ಎಂದು ತಿಳಿಸಿದರು. ಯೆನಪೋಯ ವಿಶ್ವವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆಯ ಸಂಚಾಲಕಿ ಡಾ. ಅಶ್ವಿನಿ ಶೆಟ್ಟಿ, ಸ್ಥನ ಕ್ಯಾನ್ಸರ್ ಬಗ್ಗೆ ತಿಳುವಳಿಕೆ ಕೊಟ್ಟರು.

ಎನ್‍ಎಸ್‍ಎಸ್ ಘಟಕದ ಡಾ. ಇಮ್ರಾನ್ ಪಾಶ ಮಾತನಾಡಿ, ಸರ್ಕಾರದ ವಿವಿಧ ಆರೋಗ್ಯ ಯೋಜನೆಗಳ ಕುರಿತು ಮಾಹಿತಿ ನೀಡಿದರು. ಡಾ. ಆರ್. ಪ್ರಜೇತ್, ಪ್ರಥಮ ಚಿಕಿತ್ಸೆ ಬಗ್ಗೆ ವಿವರಿಸಿದರು. ಯೆನಪೋಯ ವಿಶ್ವವಿದ್ಯಾಲಯದ ಸಹಾಯಕ ಪ್ರಾಧ್ಯಾಪಕಿ ಡಾ. ಶೃತಿ ಭಂಡಾರಿ ಹಾಗೂ ಡಾ. ಸೌಮ್ಯ ಸಿಂಗ್ ಹೃದಯ ರಕ್ತನಾಳ ರಕ್ಷಿಸುವಿಕೆ ಬಗ್ಗೆ ವಿವರಿಸಿದರು. ಸಹಾಯಕ ಪ್ರಾಧ್ಯಾಪಕ ಡಾ. ಉಮೇಮಾ ಚಿಕಿತ್ಸೆಯ ಬಗ್ಗೆ ವಿವರಿಸಿದರು. ಜ್ಞಾನಕಾವೇರಿ ಸ್ನಾತಕೋತ್ತರ ಕೇಂದ್ರದ ಪ್ರಬಾರ ನಿರ್ದೇಶಕಿ ಪ್ರೊ. ಮಂಜುಳಾ ಶಾಂತರಾಮ್, ರಾಷ್ಟ್ರೀಯ ಸೇವಾ ಯೋಜನೆಯ ಸಂಚಾಲಕ ಡಾ. ಚಂದ್ರಶೇಖರ್ ಜಿ. ಜೋಶಿ, ಹೆಬ್ಬಾಲೆಯ ಪ್ರಾಥಮಿಕ ಆರೋಗ್ಯ ಕೇಂದ್ರ ವೈದ್ಯಾಧಿಕಾರಿ ಡಾ. ಭರತ್, ಜೀವರಸಾಯನಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರೊ. ಕೆ.ಎಸ್. ಚಂದ್ರಶೇಖರಯ್ಯ, ಸೂಕ್ಷ್ಮಾಣು ಜೀವ ವಿಜ್ಞಾನ ವಿಭಾಗದ ಸಂಯೋಜಕಿ ಡಾ. ಐ.ಕೆ. ಮಂಜುಳಾ, ಡಾ. ಗುಣಶ್ರೀ, ಯೋಗಿಕ್ ಡಾ. ಜೆ. ಶಾಮಾ ಸುಂದರ್ ಮೊದಲಾದವರು ಉಪಸ್ಥಿತರಿದ್ದರು.