*ಗೋಣಿಕೊಪ್ಪಲು, ಜ. 20 : ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಅಬಕಾರಿ ಇಲಾಖೆ ಬಂಧಿಸಿದ್ದು, 15 ಲೀ. ಮದ್ಯವನ್ನು ವಶಪಡಿಸಿಕೊಂಡಿದ್ದಾರೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ, ಹೈಸೊಡ್ಲೂರು ಗ್ರಾಮದ ನಿವಾಸಿ ಪಳನಿಯಾಂಡಿ ಎಂಬಾತನನ್ನು ಬಂಧಿಸಲಾಗಿದೆ. ಹೈಸೊಡ್ಲೂರು ಗ್ರಾಮದಲ್ಲಿ ಕೆಲ ವರ್ಷಗಳಿಂದ ದಿನಸಿ ಅಂಗಡಿ ನಡೆಸುತ್ತಿದ್ದ ಪಳನಿಯಾಂಡಿ ತನ್ನ ಅಂಗಡಿಯಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ. ನಿಗದಿತ ಬೆಲೆಗಿಂತ ಹೆಚ್ಚುವರಿಯಾಗಿ ಸ್ಥಳೀಯ ಕಾರ್ಮಿಕರಿಗೆ ಮದ್ಯ ಮಾರಾಟ ಮಾಡುತ್ತಿದ್ದ ಖಚಿತ ಮಾಹಿತಿಯ ಮೇರೆಗೆ ವೀರಾಜಪೇಟೆ ಅಬಕಾರಿ ನಿರೀಕ್ಷಕ ಹೆಚ್.ಜಿ. ಶ್ರೀನಿವಾಸ್ ನೇತೃತ್ವದಲ್ಲಿ ದಾಳಿ ನಡೆಸಲಾಗಿದ್ದು, ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಕಾರ್ಯಾಚರಣೆಯಲ್ಲಿ ಅಬಕಾರಿ ಇಲಾಖೆಯ ಹೆಚ್.ಸಿ. ಚಂದ್ರ, ಸುನೀಲ್ ಕುಮಾರ್, ಮದನ್ಕುಮಾರ್, ಸಚ್ಚಿದಾನಂದ ಹಾಜರಿದ್ದರು.