*ಗೋಣಿಕೊಪ್ಪ, ಜ. 20: ಹಂತ ಹಂತವಾಗಿ ಲೈನ್ ಮನೆ ಕಾರ್ಮಿಕರ ಬೇಡಿಕೆಯ ಹಕ್ಕುಪತ್ರವನ್ನು ವಿತರಣೆ ಮಾಡಲಾಗುತ್ತದೆ ಎಂದು ಶಾಸಕ ಕೆ.ಜಿ. ಬೋಪಯ್ಯ ಭರವಸೆ ನೀಡಿದರು.
ಬುಡಕಟ್ಟು ಕಾರ್ಮಿಕ ಸಂಘದ ವತಿಯಿಂದ ಪೆÇನ್ನಂಪೇಟೆ ತಾಲೂಕು ಪಂಚಾಯಿತಿ ಕಚೇರಿ ಆವರಣದಲ್ಲಿ ಅಹೋರಾತ್ರಿ ಧರಣಿಯಲ್ಲಿ ಪಾಲ್ಗೊಂಡ ಪ್ರತಿಭಟನಾಕಾರರನ್ನು ಉದ್ದೇಶಿಸಿ ಅವರು ಮಾತನಾಡಿದರು.
ಈಗಾಗಲೇ ಬಿಟ್ಟಂಗಾಲ ಪಂಚಾಯಿತಿ ವ್ಯಾಪ್ತಿಯ 68 ಫಲಾನುಭವಿಗಳಿಗೆ ಹಕ್ಕು ಪತ್ರ ನೀಡಲಾಗಿದೆ. ಹಂತಹಂತವಾಗಿ ಸಮಸ್ಯೆಯನ್ನು ಪರಿಹರಿಸಲಾಗುವುದು. ಆತುರ ಪಡುವುದು ಬೇಡ ತಾಳ್ಮೆಯಿಂದ ಕಾಯಿರಿ ಸೌಲಭ್ಯಗಳನ್ನು ಒದಗಿಸಿಕೊಡಲಾಗುವುದು ಸಮಯಾವಕಾಶ ನೀಡಿ ಎಂದರು.
ಶಾಸಕರ ಭರವಸೆಗೆ ತಲೆದೂಗಿದ ಪ್ರತಿಭಟನಕಾರರು; ಹಕ್ಕುಗಳಿಂದ ವಂಚಿತರಾಗಿದ್ದೇವೆ. ನಮಗೆ ಮೂಲಭೂತ ಸೌಲಭ್ಯ ಒದಗಿಸಿ ಸ್ವಂತ ಮನೆ ಕಲ್ಪಿಸಿ; ಪಾರಂಪರಿಕವಾಗಿ ಕೊಡಗಿನಲ್ಲಿ ವಾಸಮಾಡುತ್ತಿರುವ ನಮಗೆ ಯಾವುದೇ ಸೌಲಭ್ಯಗಳಿಲ್ಲ ವಲಸಿಗರಿಗೆ ವ್ಯವಸ್ಥೆ ಕಲ್ಪಿಸಿಕೊಡುವ ನೀತಿ ನಮ್ಮನ್ನು ಕಡೆಗಣಿಸುತ್ತಿದೆ ಎಂದು ನೋವು ತೋಡಿಕೊಂಡರು. ಬುಡಕಟ್ಟು ಕಾರ್ಮಿಕರ ಸಂಘದ ಅಧ್ಯಕ್ಷ ಗಪ್ಪು ಮನವಿ ಸಲ್ಲಿಸಿದರು.
ಈ ಸಂದರ್ಭ ಶಾಸಕರೂಂದಿಗೆ ತಾಲೂಕು ಬಿಜೆಪಿ ಅಧ್ಯಕ್ಷ ನೆಲ್ಲೀರ ಚಲನ್ಕುಮಾರ್, ನಿಕಟಪೂರ್ವ ಅಧ್ಯಕ್ಷ ಕುಂಞಂಗಡ ಅರುಣ್ ಭೀಮಯ್ಯ, ರಾಜ್ಯ ಚೇಂಬರ್ ಆಫ್ ಕಾಮರ್ಸ್ ನಿರ್ದೇಶಕ ಕಾಡ್ಯಮಾಡ ಗಿರೀಶ್ ಗಣಪತಿ, ಸಂಘದ ಸದಸ್ಯರು ಹಾಗೂ ನೂರಾರು ಪ್ರತಿಭಟನಾಕಾರರು ಹಾಜರಿದ್ದರು.