ಮಡಿಕೇರಿ, ಜ.20 : ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಅವರ ಜನ್ಮ ದಿನಾಚರಣೆಯ ಪ್ರಯುಕ್ತ ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ವತಿಯಿಂದ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ತಾ.24 ರಂದು ಪ್ರಬಂಧ ಮತ್ತು ಚಿತ್ರಕಲೆ ಸ್ಪರ್ಧೆಯನ್ನು ಆಯೋಜಿಸಲಾಗಿದೆ ಎಂದು ಅಕಾಡೆಮಿ ಅಧ್ಯಕೆÀ್ಷ ಡಾ.ಅಮ್ಮಾಟಂಡ ಪಾರ್ವತಿ ಅಪ್ಪಯ್ಯ ತಿಳಿಸಿದ್ದಾರೆ.

ಪತ್ರಿಕಾ ಪ್ರಕಟಣೆ ನೀಡಿರುವ ಅವರು ಅಕಾಡೆಮಿ ವತಿಯಿಂದ ಫೀ.ಮಾ. ಕಾರ್ಯಪ್ಪ ಜನ್ಮ ದಿನಾಚರಣೆಯ ಪ್ರಯುಕ್ತ ತಾ.24 ರಂದು ಬೆಳಗ್ಗೆ 11 ಗಂಟೆಯಿಂದ 12 ಗಂಟೆಯವರೆಗೆ ನಗರದ ದೇವರಾಜು ಅರಸು ಭವನದಲ್ಲಿ ವಿದ್ಯಾರ್ಥಿಗಳಿಗಾಗಿ ಜಿಲ್ಲಾ ಮಟ್ಟದ ಸ್ಪರ್ಧೆಯನ್ನು ನಡೆಸಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಅವರ ದೇಶಸೇವೆ ಬಗ್ಗೆ ಮತ್ತು ಜೀವನ ಮೌಲ್ಯ ಕುರಿತು ವಿದ್ಯಾರ್ಥಿಗಳು ಪ್ರಬಂಧ ಬರೆಯಬೇಕು ಮತ್ತು ವೀರಸೇನಾನಿ ಕೆ.ಎಂ.ಕಾರ್ಯಪ್ಪ ಅವರ ಭಾವಚಿತ್ರವನ್ನು ಚಿತ್ರಕಲೆಯ ಮೂಲಕ ರಚಿಸಬೇಕು.

ಸ್ಪರ್ಧೆಯಲ್ಲಿ ಪಾಲ್ಗೊಳ್ಳುವ ವಿದ್ಯಾರ್ಥಿಗಳು ಪ್ರಬಂಧವನ್ನು ಕೊಡವ ಭಾಷೆಯಲ್ಲೇ ಬರೆಯಬೇಕು. ಪ್ರತಿ ಸ್ಪರ್ಧೆಯಲ್ಲಿ ಪ್ರತಿ ಶಾಲೆಯಿಂದ ಮೂವರು ವಿದ್ಯಾರ್ಥಿಗಳು ಭಾಗವಹಿಸಬಹುದು, ಪ್ರಬಂಧ ಬರೆಯಲು ಮತ್ತು ಚಿತ್ರ ಬಿಡಿಸಲು ಹಾಳೆಗಳನ್ನು ಅಕಾಡೆಮಿ ವತಿಯಿಂದ ನೀಡಲಾಗುವುದು. ಚಿತ್ರಕಲೆಗೆ ಅಗತ್ಯವಿರುವ ಲೇಖನಿ ಸಾಮಗ್ರಿಗಳನ್ನು ವಿದ್ಯಾರ್ಥಿಗಳೇ ತರಬೇಕು. ವಿಜೇತರಿಗೆ ಆಕರ್ಷಕ ನಗದು ಬಹುಮಾನ ನೀಡಲಾಗುವುದು ಎಂದು ಅವರು ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗೆ 08272 229074 ಮತ್ತು 8971958996ನ್ನು ಸಂಪರ್ಕಿಸ ಬಹುದಾಗಿದೆ.