ಮಡಿಕೇರಿ, ಜ. 20: ಫೀ.ಮಾ. ಕೆ.ಎಂ. ಕಾರ್ಯಪ್ಪ ಅವರ ಜನ್ಮದಿನವನ್ನು ತಾ.28ರಂದು ಆಚರಿಸುವ ದಿಸೆಯಲ್ಲಿ ಜಿಲ್ಲಾಡಳಿತದಿಂದ ಸಹಕಾರ ನೀಡುವುದಾಗಿ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಭರವಸೆ ನೀಡಿದ್ದಾರೆ. ಇಂದು ತಮ್ಮ ಕಚೇರಿಯಲ್ಲಿ ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಹಾಗೂ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಮತ್ತು ಜನರಲ್ ತಿಮ್ಮಯ್ಯ ಫೋರಂ ಪ್ರಮುಖರೊಂದಿಗೆ ಅವರು ಪೂರ್ವಭಾವಿ ಸಮಾಲೋಚನೆ ನಡೆಸಿದರು.ಜಯಂತಿ ಆಚರಣೆ ಸಂಬಂಧ ಸರಕಾರದಿಂದ ಯಾವುದೇ ಸೂಚನೆ ಈತನಕ ಬಂದಿಲ್ಲವೆಂದು ನುಡಿದ ಜಿಲ್ಲಾಧಿಕಾರಿ, ಎಂದಿನಂತೆ ವೀರಸೇನಾನಿಯ ಜಯಂತಿಗೆ ಜಿಲ್ಲಾಡಳಿತ ಎಲ್ಲಾ ರೀತಿ ಸಹಕಾರ ನೀಡುವುದಾಗಿ ಭರವಸೆಯಿತ್ತರು.ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಅಧ್ಯಕ್ಷೆ ಡಾ. ಪಾರ್ವತಿ ಅಪ್ಪಯ್ಯ, ಫೋರಂ ಪ್ರಮುಖ ಮೇ.ಬಿ.ಎ. ನಂಜಪ್ಪ ಸೇರಿದಂತೆ ಇತರ ಸದಸ್ಯರು, ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.