ಕೂಡಿಗೆ, ಜ. 20: ಪಶುಪಾಲನೆ ಮತ್ತು ಪಶು ವೈದ್ಯ ಸೇವಾ ಇಲಾಖೆ ಸೋಮವಾರಪೇಟೆ ಮತ್ತು ಹಾಲು ಉತ್ಪಾದಕರ ಸಹಕಾರ ಸಂಘ ಮದಲಾಪುರ, ಹಾಗೂ ಗ್ರಾಮ ಪಂಚಾಯಿತಿ ಕೂಡಿಗೆ ಇವರ ಸಂಯುಕ್ತ ಆಶ್ರಯದಲ್ಲಿ ಉಚಿತ ಪಶು ಚಿಕಿತ್ಸಾ ಶಿಬಿರ ಕಾರ್ಯಕ್ರಮವು ಮದಲಾಪುರದ ಹಾಲು ಉತ್ಪಾದಕರ ಸಹಕಾರ ಸಂಘದ ಆವರಣದಲ್ಲಿ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೂಡಿಗೆ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಕೆ.ಟಿ. ಗಿರೀಶ್ ವಹಿಸಿದ್ದರು. ಉದ್ಘಾಟನೆಯನ್ನು ಜಿಲ್ಲಾ ಪಂಚಾಯಿತಿ ಸದಸ್ಯೆ ಮಂಜುಳ ನೆರವೇರಿಸಿದರು.

ಮುಖ್ಯ ಅತಿಥಿಗಳಾಗಿ ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಎಸ್.ಎನ್. ರಾಜರಾವ್, ಕೂಡಿಗೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪ್ರೇಮಲೀಲಾ, ತಾಲೂಕು ಪಂಚಾಯತ್ ಸದಸ್ಯೆ ಸಬೀತಾ ಚನ್ನಕೇಶವ ಮಾತನಾಡಿದರು.

ಗ್ರಾಮ ಪಂಚಾಯಿತಿ ಸದಸ್ಯೆ ಕಲ್ಪನಾ, ಮದಲಾಪುರ ಹಾಲು ಉತ್ಪಾದಕ ಸಹಕಾರ ಸಂಘದ ಉಪಾಧ್ಯಕ್ಷ ಪುಟ್ಟಣ್ಣಯ್ಯ ಇದ್ದರು. ವಿಸ್ತರಣಾಧಿಕಾರಿ ವೀಣಾ, ತಾಂತ್ರಿಕ ಮಾಹಿತಿ ನೀಡಿದರು. ಡಾ. ಕೆ. ನಾಗರಾಜ ಇಲಾಖೆಯ ಮಾಹಿತಿ ನೀಡಿದರು.