ವೀರಾಜಪೇಟೆ, ಜ. 20 : ವೀರಾಜಪೇಟೆ ನಗರದ ಸರ್ಕಾರಿ ಆಸ್ಪತ್ರೆಯಲ್ಲಿ ಎರಡು ದಿನಗಳ ಹಿಂದೆ ಒಳ ರೋಗಿಯಾಗಿ ದಾಖಲಾಗಿದ್ದ ಸುಮಾರು 70 ವರ್ಷದ ಪ್ರಾಯದ ವೃದ್ಧರೊಬ್ಬರು ಸಾವನ್ನಪ್ಪಿದ್ದು ಮೃತ ವೃಕ್ತಿಯ ಗುರುತು ಪತ್ತೆಯಾಗಿಲ್ಲ ಮೃತರ ಶವವನ್ನು ಸರ್ಕಾರಿ ಆಸ್ಪತ್ರೆಯ ಶವಗಾರದಲ್ಲಿರಿಸಲಾಗಿದೆ. ಮೃತರ ವಾರಿಸುದಾರರು ಇದ್ದಲ್ಲಿ ವೀರಾಜಪೇಟೆ ಗ್ರಾಮಾಂತರ ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ (ದೂ. 08274-257333) ಪೊಲೀಸ್ ಪ್ರಕಟಣೆ ತಿಳಿಸಿದೆ.