ಮಡಿಕೇರಿ, ಜ. 21: ಮಂಗಳೂರು ವಿಮಾನ ನಿಲ್ದಾಣದಲ್ಲಿ ನಿನ್ನೆ ಬಾಂಬೊಂದು ಪತ್ತೆಯಾಗಿರುವ ಬೆನ್ನಲ್ಲೇ ಕೊಡಗು ಸಹಿತ ರಾಜ್ಯದೆಲ್ಲೆಡೆ ಪೊಲೀಸ್ ಇಲಾಖೆ ಕಟ್ಟೆಚ್ಚರ ವಹಿಸಿದೆ. ಅಲ್ಲದೆ ಈ ಪ್ರಕರಣ ಸಂಬಂಧ ಮಂಗಳೂರು ಪೊಲೀಸ್ ಆಯುಕ್ತ ಡಾ. ಪಿ.ಎಸ್. ಹರ್ಷ ನೇತೃತ್ವದಲ್ಲಿ; ಬಾಂಬ್ ಇರಿಸಿದ್ದ ಶಂಕಿತನಿಗಾಗಿ ತೀವ್ರ ಶೋಧ ಮುಂದುವರಿದಿರುವದಾಗಿ ಮಾಹಿತಿ ಲಭಿಸಿದೆ.

ಇತ್ತ ಕೊಡಗಿನಲ್ಲಿಯೂ ಎಲ್ಲ ಸಾರ್ವಜನಿಕ ಸ್ಥಳಗಳು, ಪ್ರವಾಸಿ ತಾಣಗಳು, ಸೂಕ್ಷ್ಮ ಪ್ರದೇಶಗಳಲ್ಲಿ ಮುಂಜಾಗ್ರತಾ ದೃಷ್ಟಿಯಿಂದ; ಸುರಕ್ಷಾ ಕ್ರಮಗಳನ್ನು ಮುಂದುವರೆಸಲಾಗಿದೆ ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕಿ ಡಾ. ಸುಮನ್ ಡಿ.ಪಿ. ಅವರು ಖಚಿತಪಡಿಸಿದ್ದಾರೆ.