ಮಡಿಕೇರಿ, ಜ. 23: ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ತಾ. 31 ಮತ್ತು ಫೆಬ್ರವರಿ, 1 ರಂದು ಶನಿವಾರಸಂತೆ ಹೋಬಳಿಯ ನಿಡ್ತ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲಾ ಮೈದಾನದಲ್ಲಿ 14ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದೆ.
ಸಮ್ಮೇಳನದ ಪ್ರಯುಕ್ತ ಫೆಬ್ರವರಿ 1 ರಂದು ಸಾರ್ವಜನಿಕರಿಗೆ ವಿವಿಧ ಗ್ರಾಮೀಣ ಸ್ಪರ್ಧೆಗಳನ್ನು ಏರ್ಪಡಿಸಿದ್ದು, ಮಹಿಳೆಯರಿಗೆ ರಂಗೋಲಿ ಸ್ಪರ್ಧೆ, ಪುರುಷರಿಗೆ ಗುಡ್ಡಗಾಡು ಓಟ ಮತ್ತು 60 ವರ್ಷ ಮೇಲ್ಪಟ್ಟವರಿಗೆ ಮಡಿಕೆ ಒಡೆಯುವ ಸ್ಪರ್ಧೆ ಏರ್ಪಡಿಸಿದ್ದು, ಆಸಕ್ತರು ತಾ. 30 ರೊಳಗೆ ಹೆಸರು ನೋಂದಾಯಿಸಿ ಕೊಳ್ಳಲು ಬಿ.ಬಿ.ನಾಗರಾಜು, ಹೋಬಳಿ ಕಸಾಪ ಅಧ್ಯಕ್ಷರು, ಶನಿವಾರಸಂತೆ ಮೊ.ಸಂ. 9481858858 ಸಂಪರ್ಕಿಸಲು ಪ್ರಕಟಣೆಯಲ್ಲಿ ತಿಳಿಸಿದೆ.