ಮಡಿಕೇರಿ, ಜ. 23: ಜಿಲ್ಲೆಯಲ್ಲಿ ತಾ. 19 ಮತ್ತು 20 ರಂದು ನಡೆದ ಪಲ್ಸ್ ಪೋಲಿಯೋ ಕಾರ್ಯಕ್ರಮದಲ್ಲಿ ಇದುವರೆಗೆ ಒಟ್ಟು 39,498 ಮಕ್ಕಳಿಗೆ ಲಸಿಕೆ ನೀಡಲಾಗಿದು,್ದ ಒಟ್ಟಾರೆ ಶೇ. 99.93 ಪ್ರಗತಿ ಸಾಧಿಸಲಾಗಿದೆ.

ಗ್ರಾಮೀಣ ಪ್ರದೇಶದಲ್ಲಿ ಒಟ್ಟು 34,906 ಮಕ್ಕಳಿಗೆ ಲಸಿಕೆ ನೀಡಲಾಗಿದ್ದು, ಶೇ. 100.28 ರಷ್ಟು ನಗರ ಪ್ರದೇಶದಲ್ಲಿ ಒಟ್ಟು 4532 ಮಕ್ಕಳಿಗೆ ಲಸಿಕೆ ನೀಡಲಾಗಿದೆ. ಶೇ. 97.34 ರಷ್ಟು ಪ್ರಗತಿ ಸಾಧಿಸಲಾಗಿದೆ. ಇದರಲ್ಲಿ ಜಿಲ್ಲೆಗೆ ಆಗಮಿಸಿರುವ ಪ್ರವಾಸಿಗರು, ಅಲೆಮಾರಿಗಳು ಮತ್ತು ಕೂಲಿ ಕಾರ್ಮಿಕರ 11,858 ಮಕ್ಕಳಿಗೆ ಲಸಿಕೆ ನೀಡಲಾಗಿದೆ.

ಮಡಿಕೇರಿ ತಾಲೂಕಿನಲ್ಲಿ ಒಟ್ಟು 10869 ಮಕ್ಕಳಿಗೆ ಲಸಿಕೆಯನ್ನು ನೀಡಲಾಗಿದ್ದು, ಒಟ್ಟು ಶೇ. 105.41 ಪ್ರಗತಿ ಸಾಧಿಸಲಾಗಿದೆ. ಇದರಲ್ಲಿ ಗ್ರಾಮೀಣ ಪ್ರದೇಶದಲ್ಲಿ 8341 ಮಕ್ಕಳಿಗೆ ಲಸಿಕೆಯನ್ನು ನೀಡಲಾಗಿದ್ದು, ಶೇ. 107.14 ರಷ್ಟು ಹಾಗೂ ನಗರ ಪ್ರದೇಶದಲ್ಲಿ 2528 ಮಕ್ಕಳಿಗೆ ಲಸಿಕೆ ನೀಡಲಾಗಿದ್ದು, ಶೇ. 100.08 ರಷ್ಟು ಪ್ರಗತಿ ಸಾಧಿಸಲಾಗಿದೆ.

ಸೋಮವಾರಪೇಟೆ ತಾಲೂಕಿನಲ್ಲಿ ಒಟ್ಟು 13339 ಮಕ್ಕಳಿಗೆ ಲಸಿಕೆಯನ್ನು ನೀಡಲಾಗಿದ್ದು, ಒಟ್ಟು ಶೇ. 94.16 ಪ್ರಗತಿ ಸಾಧಿಸಲಾಗಿದೆ. ಇದರಲ್ಲಿ ಗ್ರಾಮೀಣ ಪ್ರದೇಶದಲ್ಲಿ 12892 ಮಕ್ಕಳಿಗೆ ಲಸಿಕೆಯನ್ನು ನೀಡಲಾಗಿದ್ದು, ಶೇ. 93.84 ರಷ್ಟು ನಗರ ಪ್ರದೇಶದಲ್ಲಿ 447ಮಕ್ಕಳಿಗೆ ಲಸಿಕೆಯನ್ನು ನೀಡಲಾಗಿದ್ದು, ಶೇ. 104.68 ರಷ್ಟು ಪ್ರಗತಿ ಸಾಧಿಸಲಾಗಿದೆ.

ವೀರಾಜಪೇಟೆ ತಾಲೂಕಿನಲ್ಲಿ ಒಟ್ಟು 15230 ಮಕ್ಕಳಿಗೆ ಲಸಿಕೆಯನ್ನು ನೀಡಲಾಗಿದ್ದು, ಒಟ್ಟು ಶೇ. 101.61 ಪ್ರಗತಿ ಸಾಧಿಸಲಾಗಿದೆ. ಇದರಲ್ಲಿ ಗ್ರಾಮೀಣ ಪ್ರದೇಶದಲ್ಲಿ 13673 ಮಕ್ಕಳಿಗೆ ಲಸಿಕೆಯನ್ನು ನೀಡಲಾಗಿದ್ದು, ಶೇ. 102.91 ರಷ್ಟು ನಗರ ಪ್ರದೇಶದಲ್ಲಿ 1557 ಮಕ್ಕಳಿಗೆ ಲಸಿಕೆಯನ್ನು ನೀಡಲಾಗಿದ್ದು, ಶೇ. 91.43 ರಷ್ಟು ಪ್ರಗತಿ ಸಾಧಿಸಲಾಗಿದೆ.