ಮಡಿಕೇರಿ, ಜ.23: ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ತಾ. 25 ರಂದು ರಾಷ್ಟ್ರೀಯ ಮತದಾರರ ದಿವಸವನ್ನಾಗಿ ಜಿಲ್ಲಾ ಮಟ್ಟದಲ್ಲಿ, ತಾಲೂಕು ಮಟ್ಟದಲ್ಲಿ, ಹೋಬಳಿ ಮಟ್ಟದಲ್ಲಿ, ಗ್ರಾಮ ಮತ್ತು ಎಲ್ಲಾ ಮತಗಟ್ಟೆಗಳಲ್ಲಿ ಆಚರಿಸಲಾಗುತ್ತಿದ್ದು, ಕೊಡಗು ಜಿಲ್ಲೆಯ ಎಲ್ಲಾ ಜಿಲ್ಲಾ ಮತ್ತು ತಾಲೂಕು ಮಟ್ಟದ ಇಲಾಖಾಧಿಕಾರಿಗಳು ಮತ್ತು ಎಲ್ಲಾ ಶಾಲೆ, ಕಾಲೇಜುಗಳ ಮುಖ್ಯಸ್ಥರು ತಮ್ಮ ಕಚೇರಿಯಲ್ಲಿ ತಾ. 24 ರಂದು (ಇಂದು) ಬೆಳಗ್ಗೆ 11 ಗಂಟೆಗೆ ಮತದಾರರ ಪ್ರತಿಜ್ಞಾವಿಧಿಯನ್ನು ಸ್ವೀಕರಿಸುವಂತೆ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ತಿಳಿಸಿದ್ದಾರೆ.