ನಾಪೋಕ್ಲು, ಜ.23: ಇಲ್ಲಿಗೆ ಸಮೀಪದ ಬೇತು ಗ್ರಾಮದ ಎಕ್ಸೆಲ್ ವಿದ್ಯಾಸಂಸ್ಥೆಯ ವಾರ್ಷಿಕೋತ್ಸವ ಸಮಾರಂಭ ತಾ. 25 ರಂದು ಅಪರಾಹ್ನ 1.30 ಗಂಟೆಗೆ ನಾಪೋಕ್ಲು ಕೊಡವ ಸಮಾಜದಲ್ಲಿ ನಡೆಯಲಿದೆ.ಕಾರ್ಯಕ್ರಮದಲ್ಲಿ ಮಾಜಿ ಸೈನಿಕ,ಕಾಫಿ ಬೆಳೆಗಾರ ಕೊಂಡೀರ ಸುಬ್ರಮಣಿ ಹಾಗೂ ಮುಖ್ಯ ಭಾಷಣಕಾರರಾಗಿ ಮಡಿಕೇರಿ ಆಕಾಶವಾಣಿ ಉದ್ಘೋಷಕ ಸುಬ್ರಾಯ ಸಂಪಾಜೆ ಪಾಲ್ಗೊಳ್ಳಲಿದ್ದಾರೆ. ಎಕ್ಸೆಲ್ ಸ್ಕೂಲ್ ಆಫ್ ಎಜುಕೇಶನ್ ಅಧ್ಯಕ್ಷ ಕುಟ್ಟಂಜೆಟ್ಟೀರ ಎಂ.ಮಾದಪ್ಪ ಅಧ್ಯಕ್ಷತೆ ವಹಿಸಲಿದ್ದಾರೆ.