ಮಡಿಕೇರಿ, ಜ.23: ಅಲ್ಪಸಂಖ್ಯಾತರ ನಿರ್ದೇಶನಾಲಯ ವತಿಯಿಂದ 2019-20 ನೇ ಸಾಲಿನಲ್ಲಿ ಅಲ್ಪಸಂಖ್ಯಾತ ಮುಸ್ಲಿಂ, ಕ್ರಿಶ್ಚಿಯನ್, ಸಿಖ್, ಪಾರ್ಸಿ, ಜೈನ್, ಬೌದ್ಧ ಸಮುದಾಯದ ಅರ್ಹ ಅಭ್ಯರ್ಥಿಗಳಿಂದ ರಾಜ್ಯ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಅರ್ಹತೆ: ಹೊರ ರಾಜ್ಯದಲ್ಲಿ ಓದುತ್ತಿರುವ ಕರ್ನಾಟಕದ ವಿದ್ಯಾರ್ಥಿಗಳು. 2004 ನೇ ಇಸವಿಗಿಂತ ಮುಂಚಿನ ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿಗಳು ಕರ್ನಾಟಕ ರಾಜ್ಯದ ವಿದ್ಯಾರ್ಥಿಗಳು 10ನೇ ಮತ್ತು 12 ನೇ ತರಗತಿಯನ್ನು ಹೊರ ರಾಜ್ಯಗಳಲ್ಲಿ ವ್ಯಾಸಂಗ ಮಾಡಿದವರು. 10 ಮತ್ತು 12 ನೇ ತರಗತಿಯನ್ನು ಐಜಿಸಿಎಸ್‍ಇ ಸಿಲಬಸ್‍ನಲ್ಲಿ ಮಾಡಿದವರು, 10 ಮತ್ತು 12 ನೇ ತರಗತಿಯನ್ನು ಒಪನ್ ಸ್ಕೂಲ್‍ನಲ್ಲಿ ವ್ಯಾಸಂಗ ಮಾಡಿದವರು, ಅರ್ಹ ಅಭ್ಯರ್ಥಿಗಳು ಜಿಲ್ಲಾ ಮತ್ತು ತಾಲೂಕು ಕಚೇರಿಯಿಂದ ಅರ್ಜಿ ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ನಿಗದಿತ ದಾಖಲಾತಿಗಳೊಂದಿಗೆ ಜನವರಿ 31 ರೊಳಗಾಗಿ ಜಿಲ್ಲಾ ಕಚೇರಿಗೆ ಸಲ್ಲಿಸಲು ಸೂಚಿಸಿದೆ. ಹೆಚ್ಚಿನ ಮಾಹಿತಿಗೆ ಇಲಾಖಾ ವೆಬ್‍ಸೈಟ್ ತಿತಿತಿ.goಞಜom.ಞಚಿಡಿ.ಟಿiಛಿ.iಟಿ ಅನ್ನು ಅಥವಾ ಕಚೇರಿ ದೂ.ಸಂ:08272-225528/220214 ನ್ನು ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಎಚ್.ಡಿ.ಪುಟ್ಟರಾಜು ಅವರು ತಿಳಿಸಿದ್ದಾರೆ.