ಮಡಿಕೇರಿ, ಜ.23: ಕುಟುಂಬದ ವಾರ್ಷಿಕ ವರಮಾನ ರೂ.2 ಲಕ್ಷಗಳಿಗಿಂತ ಕಡಿಮೆ ಇರುವ 20 ರಿಂದ 60 ವರ್ಷದೊಳಗಿನ ತೀವ್ರತರ ವಾದ ದೈಹಿಕ ವಿಕಲಚೇತನರಿಗೆ ಅನುಕೂಲವಾಗುವಂತೆ ಜೀವಿತ ಕಾಲದಲ್ಲಿ ಒಂದು ಬಾರಿ “ಯಂತ್ರ ಚಾಲಿತ ದ್ವಿಚಕ್ರ ವಾಹನ ನೀಡುವ ಯೋಜನೆ” ಇದೆ. ಈ ಯೋಜನೆಗೆ ಕೊಡಗು ಜಿಲ್ಲೆಯ ವ್ಯಾಪ್ತಿಗೊಳಪಡುವ ಶೇ.75 ಕ್ಕಿಂತ ಹೆಚ್ಚಿನ ದೈಹಿಕ ವಿಕಲ ಚೇತನತೆ ಇರುವ ಸೊಂಟದಿಂದ ಕೆಳಗೆ ಸ್ವಾಧೀನ ಇಲ್ಲದಿರುವ ಹಾಗೂ ಕೈಗಳು ಸ್ವಾಧೀನದಲ್ಲಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ದೈಹಿಕ ವಿಕಲಚೇತನರಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಯನ್ನು ಕಚೇರಿಯಿಂದ ಪಡೆದು ಜನವರಿ 31ರೊಳಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ಕಚೇರಿ ದೂ.ಸಂ. 08272-295829 ನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು ಎಂದು ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಕಲ್ಯಾಣಾಧಿಕಾರಿ ಸಂಪತ್ ಕುಮಾರ್ ಅವರು ತಿಳಿಸಿದ್ದಾರೆ.