ನಾಪೆÇೀಕ್ಲು, ಜ. 23: ಬಲ್ಲಮಾವಟಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಾಲ್ಕು ಗ್ರಾಮಗಳ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ವೀರಾಜಪೇಟೆ ಕ್ಷೇತ್ರದ ಶಾಸಕ ಕೆ.ಜಿ. ಬೋಪಯ್ಯ ದೊಡ್ಡಪುಲೀಕೊಟ್ ಶಾಲೆಯ ಬಳಿ ಪಂದೇಟ್ ರಸ್ತೆಯಲ್ಲಿ ಭೂಮಿ ಪೂಜೆಯನ್ನು ನೆರವೇರಿಸಿದರು. ನಂತರ ಮಾತನಾಡಿದ ಅವರು ಈ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಾಲ್ಕು ಗ್ರಾಮಗಳ ರಸ್ತೆ, ಸೇತುವೆ, ಮೋರಿ ಮತ್ತು ಕಾಲೋನಿಗಳ ಅಭಿವೃದ್ಧಿಗೆ ಮೊದಲ ಹಂತದಲ್ಲಿ ಸುಮಾರು ರೂ. 2.25 ಕೋಟಿ ವೆಚ್ಚದಲ್ಲಿ ಕಾಮಗಾರಿಗಳನ್ನು ಕೈಗೊಳ್ಳಲಾಗಿದ್ದು ಈ ಕಾರ್ಯವನ್ನು ಕೂಡಲೇ ಮುಗಿಸಿ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಲಾಗುವುದೆಂದರು. ಅದರಂತೆ ಎಮ್ಮೆ ಮಾಡು ಗ್ರಾಮ ಪಂಚಾಯಿತಿಗೆ ಗ್ರಾಮೀಣಾಭಿüವೃದ್ಧಿ ಯೋಜನೆಯಡಿಯಲ್ಲಿ ರೂ. 1.25 ಕೋಟಿ ವೆಚ್ಚದ ವಿವಿಧ ರಸ್ತೆ ಅಭಿವೃದ್ಧಿ ಮತ್ತು ಪ್ರಧಾನ ಮಂತ್ರಿಗಳ ಗ್ರಾಮ ಸಡಕ್ ಯೋಜನೆಗೂ ಚಾಲನೆ ನೀಡಲಾಗಿದೆ ಎಂದರು. ರಾಜ್ಯ ಸರಕಾರ ಈಗಾಗಲೇ ಪ್ರತಿ ಗ್ರಾಮ ಪಂಚಾಯಿತಿ ಅಭಿವೃದ್ಧಿಗಾಗಿ ರೂ. 2 ಕೋಟಿಗಳಷ್ಟು ಹಣವನ್ನು ಬಿಡುಗಡೆ ಮಾಡಲಾಗಿದ್ದು ಮುಂದೆ ನಮ್ಮ ಸರಕಾರದ ಮಾರ್ಚ್ ಬಜೆಟ್ನಲ್ಲಿ ಕೊಡಗಿನ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ಮತ್ತು ಅತಿ ವೃಷ್ಟಿಯಿಂದ ಹಾನಿಯಾದವರಿಗೆ ಅನುದಾನವನ್ನು ಕೊಡುವ ವ್ಯೆವಸ್ಥೆಯಾಗುವುದು ಎಂದರು.
ಈ ಸಂದರ್ಭ ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಬಿ.ಎ ಹರೀಶ್, ಸದಸ್ಯ ಮುರುಳಿಧರ್ ಕರುಂಬಮ್ಮಯ್ಯ, ತಾಲೂಕು ಪಂಚಾಯಿತಿ ಅಧ್ಯಕ್ಷೆ ತೆಕ್ಕಡ ಶೋಭಾ ಮೋಹನ್, ಉಪಾಧ್ಯಕ್ಷ ಬೊಳಿಯಾಟೀರ ಸಂತು ಸುಬ್ರಮಣಿ, ಸದಸ್ಯೆ ಕೋಡಿಯಂಡ ಇಂದಿರಾ ಹರೀಶ್, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಕರವಂಡ ಸರಸು ಪೆಮ್ಮಯ್ಯ, ಅಪ್ಪಚೇಟ್ಟೊಳಂಡ ಮನು ಮುತ್ತಪ್ಪ, ಕೋಡಿರ ಪ್ರಸನ್ನ, ಪಾಡಿಯಮ್ಮಂಡ ಮನು ಮಹೇಶ್, ಗ್ರಾಮ ಪಂಚಾಯಿತಿ ಸದಸ್ಯರಾದ ಬದ್ದಂಜಟ್ಟೀರ ದೇವಿ ದೇವಯ್ಯ, ಹೊಸೋಕ್ಲು ಮುತ್ತಪ್ಪ, ಚಂಗೇಟಿರ ಕುಮಾರ್, ತಾಲೂಕು ಪಂಚಾಯಿತಿ ಇ.ಓ. ಲಕ್ಷ್ಮಿ, ಲೋಕೋಪಯೋಗಿ ಇಲಾಖೆ ಸಹಾಯಕ ಅಭಿಯಂತರ, ಸತೀಶ್, ಮತ್ತಿತರರು ಇದ್ದರು.