ಮಡಿಕೇರಿ, ಜ. 23: ಸಾಮೂಹಿಕ ವಿವಾಹ ಕಾರ್ಯಕ್ರಮಗಳಲ್ಲಿ ಪರಿಶಿಷ್ಟ ಜಾತಿಗೆ ಸೇರಿದ ದಂಪತಿಗಳಿಗೆ ಸರಳ ವಿವಾಹ ಯೋಜನೆಯಡಿ ಆರ್ಥಿಕ ನೆರವು ಮಂಜೂರು ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಬೇಕಾದ ವೆಬ್‍ಸೈಟ್ ವಿಳಾಸ: ತಿತಿತಿ.sತಿ.ಞಚಿಡಿ.ಟಿiಛಿ.iಟಿ. ಅರ್ಜಿದಾರ ದಂಪತಿಗಳು ಕರ್ನಾಟಕ ರಾಜ್ಯಕ್ಕೆ ಸೇರಿದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಕ್ಕೆ ಸೇರಿದವರಾಗಿರ ಬೇಕು. ಒಂದು ವೇಳೆ ಪತಿ ಅಥವಾ ಪತ್ನಿ ಹೊರ ರಾಜ್ಯದವರಾಗಿದ್ದಲ್ಲಿ ಮಾತ್ರ ಆ ರಾಜ್ಯದಲ್ಲಿ ಅವರು ಸಹ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಕ್ಕೆ ಸೇರಿದವರಾಗಿರಬೇಕು ಮತ್ತು ಸಾಮೂಹಿಕ ವಿವಾಹ ಕಾರ್ಯಕ್ರಮವು ಕರ್ನಾಟಕ ರಾಜ್ಯದಲ್ಲಿ ಆಗಿರುವ ಬಗ್ಗೆ ದೃಢೀಕರಣ ಪ್ರಮಾಣ ಪತ್ರ ಹೊಂದಿರತಕ್ಕದ್ದು.

ಸಾಮೂಹಿಕ ವಿವಾಹಗಳಲ್ಲಿ ಕನಿಷ್ಟ 10 ಜೋಡಿಗಳು ಭಾಗವಹಿಸಿರತಕ್ಕದ್ದು. ಈ ಸೌಲಭ್ಯ ಪಡೆಯುವ ವಧುವಿಗೆ ಕನಿಷ್ಟ 18 ವರ್ಷದಿಂದ ಗರಿಷ್ಠ 42 ವರ್ಷಗಳು, ವರನಿಗೆ ಕನಿಷ್ಟ 21 ವರ್ಷದಿಂದ ಗರಿಷ್ಠ 45 ವರ್ಷ ವಯಸ್ಸು ಆಗಿರಬೇಕು. ಈ ಯೋಜನೆಯಡಿ ಧನ ಸಹಾಯ ಪಡೆಯಲು ವಧು ಮತ್ತು ವರನ ಒಟ್ಟಾರೆ ವಾರ್ಷಿಕ ಆದಾಯವು ರೂ. 2 ಲಕ್ಷ ಮೀರಬಾರದು. ಈ ಸೌಲಭ್ಯ ಜೀವನದಲ್ಲಿ ಒಮ್ಮೆ ಮಾತ್ರ ಪಡೆಯಬಹುದಾಗಿದೆ.

ಖಾಸಗಿ ಟ್ರಸ್ಟ್‍ಗಳು (ಮಠ ಇತ್ಯಾದಿ), ದೇವಸ್ಥಾನದ ಟ್ರಸ್ಟ್‍ಗಳು, ಸಂಘ-ಸಂಸ್ಥೆಗಳು ನಡೆಸುವ ಸಾಮೂಹಿಕ ವಿವಾಹ ಕಾರ್ಯಕ್ರಮ ಗಳಲ್ಲಿ ಅಥವಾ ಸಮಾಜ ಸೇವಕರು/ ವ್ಯಕ್ತಿಗಳು ನಡೆಸುವ ಸಾಮೂಹಿಕ ವಿವಾಹ ಕಾರ್ಯಕ್ರಮಗಳಲ್ಲಿ ವಿವಾಹವಾದಲ್ಲಿ ಮಾತ್ರ ಅರ್ಜಿ ಸಲ್ಲಿಸಲು ಅರ್ಹರಿರುತ್ತಾರೆ. ವಿವಾಹಿತ ದಂಪತಿಗಳು ಉಪನೋಂದಣಿ ಕಚೇರಿಯಲ್ಲಿ ನೋಂದಣಿ ಯಾಗಿರಬೇಕು.

ಸಾಮೂಹಿಕ ವಿವಾಹಗಳನ್ನು ಏರ್ಪಡಿಸುವ ಆಯೋಜಕರುಗಳಿಗೆ ಪ್ರೋತ್ಸಾಹ ಹಾಗೂ ವಿವಾಹದ ಖರ್ಚು-ವೆಚ್ಚಗಳಿಗಾಗಿ ಪ್ರತಿ ಜೋಡಿಗೆ ರೂ. 2 ಸಾವಿರ ನೀಡುವುದು. ಈ ಸಂಸ್ಥೆಗಳು ಆಯೋಜಿಸಿರುವ ಸಾಮೂಹಿಕ ವಿವಾಹ ಕಾರ್ಯಕ್ರಮ ಗಳಲ್ಲಿ ವಿವಾಹವಾಗಿರುವ ಬಗ್ಗೆ ಆಯೋಜಕರಿಂದ ಪ್ರಮಾಣ ಪತ್ರ ಸಲ್ಲಿಸತಕ್ಕದ್ದು. ಪ್ರೋತ್ಸಾಹ ಧನ ಪಡೆಯಲು ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಸರಳ ವಿವಾಹವಾದ 1 ವರ್ಷದೊಳಗಾಗಿ ಜಿಲ್ಲೆಗಳ ಜಂಟಿ/ ಉಪ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ ಅವರಿಗೆ ಜಂಟಿಯಾಗಿ ನಿಗದಿತ ನಮೂನೆಯಲ್ಲಿ ಮತ್ತು ಅಗತ್ಯ ದಾಖಲಾತಿಗಳೊಂದಿಗೆ ಅರ್ಜಿ ಸಲ್ಲಿಸತಕ್ಕದ್ದು. ವಧು-ವರನು ವಿವಾಹವಾದ ಬಳಿಕ ವಾಸ್ತವ್ಯವಿರುವ ಜಿಲ್ಲೆಯಲ್ಲಿ ಅರ್ಜಿ ಸಲ್ಲಿಸಬೇಕು.

ಸಾಮೂಹಿಕ ವಿವಾಹ ಕಾರ್ಯಕ್ರಮದ ಫೋಟೋ ಹಾಗೂ ವಧು-ವರನ ಜಂಟಿ ಭಾವಚಿತ್ರಗಳನ್ನು (ಸ್ಥಿರ ಚಿತ್ರಗಳನ್ನು) ಆಯೋಜಕರಿಂದ ಪಡೆದು ಅರ್ಜಿಯೊಂದಿಗೆ ಲಗತ್ತಿಸುವುದು. ಮಂಜೂರಾದ ಪ್ರೋತ್ಸಾಹಧನದ ಹಣವನ್ನು ವಧು ಹಾಗೂ ವರನಿಗೆ ಜಂಟಿಯಾಗಿ ಮಂಜೂರು ಮಾಡಲಾಗುವುದು ಹಾಗೂ ಮಂಜೂರಾದ ಮೊತ್ತವನ್ನು ವಧು ಮತ್ತು ವರನ ಹೆಸರಿನಲ್ಲಿರುವ ಜಂಟಿ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗುವುದು. ಇಂತಹ ಸಾಮೂಹಿಕ ವಿವಾಹ ಕಾರ್ಯಕ್ರಮ ಗಳಲ್ಲಿ ಯಾವುದೇ ತರಹದ ಬಾಲ್ಯ ವಿವಾಹ ಅಥವಾ ಅಪ್ರಾಪ್ತ ವಯಸ್ಸಿನ ವಿವಾಹಗಳಿಗೆ ಆರ್ಥಿಕ ನೆರವು ನೀಡಲು ಅವಕಾಶವಿರುವುದಿಲ್ಲ.

ಹೆಚ್ಚಿನ ಮಾಹಿತಿಗೆ ಉಪ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಕೊಡಗು ಜಿಲ್ಲೆ, ಮಡಿಕೇರಿ-08272-225531. ಸಹಾಯಕ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಮಡಿಕೇರಿ-08272-223552. ಸಹಾಯಕ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಸೋಮವಾರಪೇಟೆ-08276-281115, ಸಹಾಯಕ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಪೊನ್ನಂಪೇಟೆ-08274-249476 ನ್ನು ಸಂಪರ್ಕಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ.